ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಆಗಸ್ಟ್ 23 ರಂದು) 18 ಪುರುಷರು ಹಾಗೂ 17 ಮಹಿಳೆಯರು ಸೇರಿದಂತೆ 35 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದೆ.
ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 4 ಪುರುಷರು ಮತ್ತು 6 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 9 ಪುರುಷರು ಮತ್ತು 5 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 3 ಪುರುಷರು ಮತ್ತು 4 ಮಹಿಳೆಯರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನ ಗೊಂದಲ ಮುಂದುವರೆದಿದೆ.