ಬೆಂಗಳೂರು: ಉತ್ತರಾಖಂಡ ರಾಜ್ಯದ ಡೆಹರಾಡೂನಿನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಇಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2020ರ ಡಿಸೆಂಬರ್ 1 ಮತ್ತು 2 ರಂದು ನಡೆಸಲಾಗುವುದು.
ಪ್ರಸ್ತುತ 7 ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ 13 ವರ್ಷದೊಳಗಿರುವ ಬಾಲಕರು ಮಾತ್ರ ಸದರಿ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.
ಅರ್ಜಿ ನಮೂನೆಯನ್ನು ನಿರ್ದೇಶಕರು, ಸೈನಿಕ ಮತ್ತು ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಪೀಲ್ಡ್ ಮಾರ್ಷನ್ ಕಾರ್ಯಪ್ಪ, ಭವನ, ನಂ. 58 ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು ಇಲ್ಲಿಂದ ಪಡೆಯಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ದೂರವಾಣಿ 0780- 25589459 ಅಥವಾ ಸಮೀಪದಲ್ಲಿರುವ ತಮ್ಮ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಾರ್ಯಾಲಯವನ್ನು ಸಂಪರ್ಕಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ.