ಬೆಂಗಳೂರು: ಪ್ರಸಕ್ತ 15ನೇ ವಿಧಾನಸಭೆಯ 7ನೇ ಅಧಿವೇಶನ ನಡೆಸುವ ಸಾಧ್ಯಾಸಾಧ್ಯತೆ ಕುರಿತಂತೆ ಇಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು,ಕಾನೂನು ಸಚಿವ ಮಾಧುಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಹಾಗೂ ವಿಧಾನಸಭೆಯ ಹಿರಿಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಚರ್ಚಿಸಿದರು.
ಸಭೆಯ ನಂತರ ವಿಧಾನಸಭೆಯ ಸಭಾಂಗಣವನ್ನು ವೀಕ್ಷಿಸಿದರು.