ದೆಹಲಿ: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು.
ದೆಹಲಿಯ ಕೇಂದ್ರ ಬಿಜೆಪಿ ಕಚೇರಿಯಲ್ಲಿ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ ಸಮ್ಮುಖದಲ್ಲಿ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ತಮಿಳುನಾಡು ರಾಜ್ಯಾಧ್ಯಕ್ಷ ಡಾ.ಎಲ್.ಮುರುಗನ್, ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಉಪಸ್ಥಿತರಿದ್ದರು.
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ, ದಕ್ಷ ಅಧಿಕಾರಿ ಎಂದು ಕರೆಸಿಕೊಂಡಿದ್ದ ಅಣ್ಣಾಮಲೈ ಅವರು ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ರಾಜಕೀಯ ಸೇರುತ್ತಾರೆ ಎಂದು ಚರ್ಚೆಯಾಗಿತ್ತು.