ದೊಡ್ಡಬಳ್ಳಾಪುರ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2019-20ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ದ್ವೀತಿಯ ಪಿ.ಯು.ಸಿ/3 ವರ್ಷ ಅವಧಿಯ ಡಿಪ್ಲೋಮಾ ಪಾಲಿಟೆಕ್ನಿಕ್(II PUC/3 Years Diploma Polytechnic) ವಿದ್ಯಾರ್ಥಿಗಳಿಗೆ 20,000/- ರೂ.ಗಳು, ಪದವಿ(Degree) ವಿದ್ಯಾರ್ಥಿಗಳಿಗೆ 25,000/-ರೂ.ಗಳು,
ಪದವಿ ನಂತರದ ಕೋರ್ಸ್‌ಗಳಾದ ಎಂ.ಎ, ಎಂ.ಎಸ್ಸಿ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಫ್.ಎ ಇತ್ಯಾದಿ
(Post Graduate Course like MA, M.sc, Mcom, MBA, MCA, MFA etc.,) ವಿದ್ಯಾರ್ಥಿಗಳಿಗೆ 30,000/- ರೂ.ಗಳು, ಅಗ್ರಿಕಲ್ಚರ್/ ಎಂಜಿನಿಯರಿಂಗ್/ ಮೆಡಿಸಿನ್/ವೆಟರ್ನರಿ(Agriculture/Engineering/Medicine/ Vetrinary) ವಿದ್ಯಾರ್ಥಿಗಳಿಗೆ 35,000/- ರೂ.ಗಳನ್ನು ಪ್ರ್ರೇತ್ಸಾಹಧನವಾಗಿ ನಿಡಲಾಗುವುದು.
ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಇಲಾಖಾ ವೆಬ್‍ಸೈಟ್ www.tw.kar.nic.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಪಿ.ಯು.ಸಿ/ಪದವಿ/ಸ್ವಾತಕೋತ್ತರ ಪದವಿ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವುದು.
ಪಿಯುಸಿ ಹಾಗೂ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ದೃಡೀಕೃತ ದಾಖಲಾತಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ: 205, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಈ ಕಚೇರಿಗೆ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣ ಪತ್ರಗಳು/ಅಂಕಪಟ್ಟಿಗಳು, ಚಾಲ್ತಿಯಲ್ಲಿರುವ ಮತ್ತು ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ವಿವರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-29787448 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.