ದೊಡ್ಡಬಳ್ಳಾಪುರ: ಕರ್ನಾಟಕ ಉಪ್ಪಾರ ನಿಗಮದ ವತಿಯಿಂದ 2020-21ನೇ ಸಾಲಿನಲ್ಲಿ ಉಪ್ಪಾರ ಮತ್ತು ಅದರ ಉಪಜಾತಿಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಸಾಲ ಯೋಜನೆ ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಇಚ್ಛಿಸುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಉಪ್ಪಾರ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಗಳ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಹ ಫಲಾಪೇಕ್ಷಿಗಳು, ಅರ್ಜಿಗಳನ್ನು ವೆಬ್‌ಸೈಟ್ www.dbcdc.karnataka.gov.in ಹಾಗೂ ಅವರು ವಾಸಿಸುತ್ತಿರುವ ಆಯಾ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಉಚಿತವಾಗಿ ಸಂಬಂಧಿಸಿದ ಯೋಜನೆಯ ಅರ್ಜಿಗಳನ್ನು ಪಡೆಯಬಹುದಾಗಿರುತ್ತದೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ, 2020ರ ಸೆಪ್ಟೆಂಬರ್ 05 ರೊಳಗೆ ಸಲ್ಲಿಸುವುದು. ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ., ಬೆಂಗಳೂರು ಗ್ರಾಮಾಂತರ ಜಿಲ್ಲೆ, # 324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ, ಬೆಂಗಳೂರು-560032 ಹಾಗೂ ದೂ.ಸಂ.: 080-23536007 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕಿ ಎನ್.ಸುಜಾತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.