ಬೆಳಗಾವಿ: ಇನ್ನು ಎರಡ್ಮೂರು ತಿಂಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಲಿದೆ ಎಂದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಸಚಿವರು, ಸಂಸತ್ ಸದಸ್ಯರು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಕೋವಿಡ್-19 ಕಾರಣದಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಆದರೂ, ಸರ್ಕಾರಿ ನೌಕರರಿಗೆ ವೇತನ ಸೇರಿದಂತೆ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿಂತಿಲ್ಲ ಎಂದ ಅವರು ಕಳೆದ ವರ್ಷದ ಪ್ರವಾಹ ಮತ್ತು ಅತಿವೃಷ್ಟಿಯಿಂದ ಹಾನಿಯಾಗಿರುವ ಮನೆಗಳ ನಿರ್ಮಾಣ ಪೂರ್ಣಗೊಳಿಸಲು ಕ್ರಮ ವಹಿಸಲಾಗಿದೆ. ಅಲ್ಲದೆ ಸಂತ್ರಸ್ತರ ಖಾತೆಗೆ ಪರಿಹಾರ ಬಿಡುಗಡೆ ಮಾಡಲಾಗುತ್ತಿದೆ. ಈ ವರ್ಷದ ಹಾನಿ ಸಮೀಕ್ಷೆ ನಡೆಯುತ್ತಿದ್ದು, ಸಮೀಕ್ಷಾ ವರದಿ ಬಳಿಕ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು. ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಪರಿಹಾರ ಕೊಡಲಾಗುವುದು. ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ 10 ರೂ. ಕೂಡ ದುರಪಯೋಗ ಆಗಬಾರದು. ಬೆಳೆಹಾನಿ ಪರಿಹಾರ ಹಣವನ್ನು ಅರ್ಹ ರೈತರಿಗೆ ನೀಡುವುದಾಗಿ ತಿಳಿಸಿದರು.
ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ,ಕಂದಾಯ ಸಚಿವ ಆರ್. ಅಶೋಕ್ ಮತ್ತಿತರಿದ್ದರು.