ಅಭಿವೃದ್ಧಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ಕರೊನಾ ಮಹಾಮಾರಿಯ ಜೊತೆ ಜೊತೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು  ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ  ಆವರಣಲ್ಲಿಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ  ನಡೆದ “ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದ ಮಾಸಿಕ ಪ್ರಗತಿ ಪರಿಶೀಲನಾ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ ನಿಗದಿಪಡಿಸಿರುವ ಭೌತಿಕ ಮತ್ತು ಆರ್ಥಿಕ ಗುರಿಯನ್ನು ಸಾಧಿಸಿ ಎಂದರಲ್ಲದೆ, ಯೋಜನೆಗಳಡಿ ಬಿಡುಗಡೆಯಾಗುವ ಅನುದಾನವನ್ನು ಆದ್ಯತೆಗೆ ಅನುಗುಣವಾಗಿ ಕ್ರಿಯಾಯೋಜನೆ ರೂಪಿಸಿ, ಖರ್ಚು ಮಾಡುವಂತೆ ಸೂಚಿಸಿದರು.

ಮಳೆಯಿಂದ ರಸ್ತೆಗಳು ಹಾಳಾಗಿದ್ದು, ಅವುಗಳನ್ನು ದುರಸ್ತಿ ಕಾರ್ಯ ಮಾಡಲು ಹಾಗೂ ಅವಶ್ಯಕ ಕಾಮಗಾರಿಗಳನ್ನು ಗುರುತಿಸಿ ಇಲಾಖೆಗೆ ನಿಗದಿಯಾಗಿರುವ ಅನುದಾನವನ್ನು ಆದ್ಯತೆ ಮೇರೆಗೆ ವಿನಿಯೋಗಿಸುವಂತೆ  ಆರ್.ಡಿ.ಪಿ.ಆರ್. ಹಾಗೂ  ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. 

ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮ ಯೋಜನೆಯಡಿ ಕೈಗೊಳ್ಳಬಹುದಾದ ಅಭಿವೃದ್ಧಿ ಕಾಮಗಾರಿ, ಫಲಾನುಭವಿಗಳ ಆಯ್ಕೆ ಕುರಿತ ಅಗತ್ಯದ ಅನುಮೋದನೆಯನ್ನು ಪಡೆದುಕೊಂಡು ಶೇ.50 ರಷ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮವಹಿಸಿ ಎಂದು ತಿಳಿಸಿದರು. 

ಪ್ರಸಕ್ತ ಸಾಲಿನ ಯೋಜನೆಯಡಿ ಬಿಡುಗಡೆಯಾಗುವ ಅನುದಾನವನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟು ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಬೇಕೆಂದರಲ್ಲದೆ, ಫಲಾನುಭವಿಗಳ ಆಯ್ಕೆ ಸಮಯದಲ್ಲಿ ಅರ್ಹರಿಗೆ ಯೋಜನೆ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದರು. ಇಲಾಖಾವಾರು ಪ್ರತ್ಯೇಕವಾಗಿ ಮಾಹಿತಿ ಪಡೆದು 

ಸಂಬಂಧಿಸಿದ ಅಧಿಕಾರಿಗಳು ಪ್ರತಿ ಮಾಹೆ ಜರುಗುವ ಸಭೆಗೆ ಕಡ್ಡಾಯವಾಗಿ ಪೂರ್ಣ ಮಾಹಿತಿಯೊಂದಿಗೆ ಹಾಜರಾಗುವಂತೆ ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ  ಹನುಮಂತರಾಯಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ  ಜಯಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ‌ ಉಪನಿರ್ದೇಶಕಿ ಪುಷ್ಪ.ಜಿ.ರಾಯ್ಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಕಾಂಗ್ರೆಸ್ಸಿನ ಒಳಗಿನ ಬಡಿದಾಟದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ; ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ಸಿನ ಒಳಗಿನ ಬಡಿದಾಟದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ; ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ಸಿನ 140 ಶಾಸಕರಿದ್ದೂ ಆಡಳಿತ ನಡೆಸಲು ಸಾಧ್ಯವಿಲ್ಲವೆಂದಾದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಸವಾಲೆಸೆದಿದ್ದಾರೆ.

[ccc_my_favorite_select_button post_id="116752"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಸಾಲಬಾಧೆ.. ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲಬಾಧೆ.. ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲ ಮತ್ತು ಬೆಳೆ ನಷ್ಟದಿಂದ ಮನನೊಂದ ರೈತ (Farmer) ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ** ಜಿಲ್ಲೆಯ *** ತಾಲೂಕಿನ ***ದಲ್ಲಿ ನಡೆದಿದೆ.

[ccc_my_favorite_select_button post_id="116605"]
ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಸೇರಿ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

[ccc_my_favorite_select_button post_id="116728"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!