ಬೆಂಗಳೂರು: ಬಸವೇಶ್ವರ ವೃತ್ತದ ಬಳಿ ಬಿ.ಬಿ.ಎಂ.ಪಿ ವತಿಯಿಂದ ನವೀಕರಿಸಲಾಗಿರುವ ಅಶ್ವಾರೂಢ ಬಸವೇಶ್ವರ ಪ್ರತಿಮೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉದ್ಘಾಟಿಸಿದರು.
ಈ ವೇಳೆ ಉಪಮುಖ್ಯಮಂತ್ರಿ ಡಾ ಸಿ.ಎನ್.ಅಶ್ವತ್ಥ್ ನಾರಾಯಣ್, ವಸತಿ ಸಚಿವ ವಿ.ಸೋಮಣ್ಣ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಬಿ.ಬಿ.ಎಂ.ಪಿ ಮಹಾಪೌರ ಗೌತಮ್ ಕುಮಾರ್, ಬಿ.ಬಿ.ಎಂ.ಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.