ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಆಗಸ್ಟ್ 26 ರಂದು) 99 ಪುರುಷರು ಹಾಗೂ 37 ಮಹಿಳೆಯರು ಸೇರಿದಂತೆ 136 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದೆ.
ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 16 ಪುರುಷರು ಮತ್ತು 6 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 51 ಪುರುಷರು ಮತ್ತು 14 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 9 ಪುರುಷರು ಮತ್ತು 8 ಮಹಿಳೆಯರು ಹಾಗೂ ಬೆಂಗಳೂರು ನಗರ ಮತ್ತು ಇತರೆ ಜಿಲ್ಲೆಗಳಿಗೆ ಸೇರಿದ 3 ಪುರುಷರು ಮತ್ತು 1 ಮಹಿಳೆಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.ಅಲ್ಲದೆ ದೇವನಹಳ್ಳಿ ತಾಲ್ಲೂಕಿನ 75 ವರ್ಷದ ವೃದ್ದರೊಬ್ಬರು ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆಂದು ವರದಿ ತಿಳಿಸಿದೆ.
ಆದರೆ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ವರದಿಯ ಗೊಂದಲ ಜಿಲ್ಲಾಡಳಿತ ಮುಂದುವರೆಸಿರುವ ಕಾರಣ ಹರಿತಲೇಖನಿ ಪ್ರಕಟಿಸುತ್ತಿಲ್ಲ.