ಬೆಂ.ಗ್ರಾ.ಜಿಲ್ಲೆ: ಖೇಲೋ ಇಂಡಿಯಾ ಕೇಂದ್ರಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಭಾರತ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ಜಿಲ್ಲೆಯಲ್ಲಿ ಖೇಲೋ ಇಂಡಿಯಾ ಕೇಂದ್ರವನ್ನು ತೆರೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇರುವ ಅರ್ಹ/ನುರಿತ ಮಾಜಿ ರಾಷ್ಟ್ರ/ಅಂತಾರಾಷ್ಟ್ರೀಯ ಮಟ್ಟದ ಚಾಂಪಿಯನ್ ಕ್ರೀಡಾಪಟುಗಳು ಹಾಗೂ ಕ್ರೀಡಾ ಮೂಲಭೂತ ಸೌಕರ್ಯ ಹೊಂದಿರುವ ನೊಂದಾಯಿತ ಕ್ರೀಡಾ ಸಂಸ್ಥೆಗಳು/ಶಿಕ್ಷಣ ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. 

ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆ ಅಡಿ ತಳಮಟ್ಟದಲ್ಲಿ ಪರಿಣಾಮಕಾರಿಯಾದ ಕ್ರೀಡಾ ತರಬೇತಿ ವ್ಯವಸ್ಥೆಯನ್ನು ಜಾರಿಗೊಳಿಸಲು ಉದ್ದೇಶಿಸಿದ್ದು, 

ದೇಶಾದ್ಯಂತ 14 ಕ್ರೀಡಾ ವಿಭಾಗ (ಆರ್ಚರಿ, ಅಥ್ಲೆಟಿಕ್ಸ್, ಬಾಕ್ಸಿಂಗ್, ಬ್ಯಾಡ್ಮಿಂಟನ್, ಸೈಕ್ಲಿಂಗ್, ಫೆನ್ಸಿಂಗ್, ಹಾಕಿ, ಜುಡೋ, ರೋಯಿಂಗ್, ಶೂಟಿಂಗ್, ಈಜು, ಟೇಬಲ್ ಟೆನ್ನಿಸ್, ಭಾರ ಎತ್ತುವುದು ಮತ್ತು ಕುಸ್ತಿ) ಗಳಲ್ಲಿ ಖೇಲೋ ಇಂಡಿಯಾ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಈ ಉದ್ದೇಶದಡಿ ಜಿಲ್ಲೆಗೆ 2-3 ರಂತೆ ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲು ಸೂಚಿಸಿರುತ್ತದೆ. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಥ್ಲೆಟಿಕ್ಸ್, ಹಾಕಿ ಮತ್ತು ಕುಸ್ತಿ ಕ್ರೀಡೆಗಳಲ್ಲಿ ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿದ್ದು, ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳ ಪರಿಣಿತಿ ಮತ್ತು ಅನುಭವಗಳನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ.

ಈ ಖೇಲೋ ಇಂಡಿಯಾ ಕೇಂದ್ರಗಳಿಗೆ ಕೇಂದ್ರ ಸರ್ಕಾರದಿಂದ ತರಬೇತುದಾರರ ಗೌರವಧನ, ಸಹಾಯಕ ಸಿಬ್ಬಂದಿ, ಕ್ರೀಡಾ ಉಪಕರಣಗಳು, ಕ್ರೀಡಾ ಕಿಟ್, ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆಗೆ ತಗಲುವ ವೆಚ್ಚವನ್ನು ಗರಿಷ್ಠ ವಾರ್ಷಿಕ ರೂ 5.00 ಲಕ್ಷ ವೆಚ್ಚವನ್ನು ಭರಿಸುತ್ತದೆ.   ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಸಂಘ ಸಂಸ್ಥೆಗಳ/ಕ್ರೀಡಾ ಸಂಸ್ಥೆಗಳ ಮುಖಾಂತರ ಶೈಕ್ಷಣಿಕ ಸಂಸ್ಥೆಗಳ ಮುಖಾಂತರ ಮೂರು ಕ್ರೀಡೆಗಳಲ್ಲಿ ಪಾಸ್ಟ್ ಚಾಂಪಿಯನ್ ಆಗಿರುವವರು ತರಬೇತುದಾರರನ್ನಾಗಿ 4 ವರ್ಷಗಳ ಅವಧಿಗೆ ನಿಯೋಜಿಸಿಕೊಳ್ಳಲಾಗುವುದು.  ಸದರಿ ತರಬೇತುದಾರರು ಕನಿಷ್ಠ 30 ಮಂದಿಗೆ ತರಬೇತಿಯನ್ನು ನೀಡಬೇಕಾಗಿರುತ್ತದೆ.  ನೇಮಕಗೊಳ್ಳುವ ತರಬೇತುದಾರರಿಗೆ ಪ್ರತೀ ಮಾಹೆ ಗೌರವಧನ ನೀಡಲಾಗುವುದು. ಹಾಗೂ ಕ್ರೀಡಾ ತರಬೇತಿಗೆ ಅವಶ್ಯವಿರುವ ಕ್ರೀಡಾ ಕಿಟ್, ಕ್ರೀಡಾ ಸಲಕರಣೆಗಳನ್ನು ಸಹ ನೀಡಲಾಗುವುದು.ಎನ್‍ಐಎಸ್ ಪ್ರಮಾಣ ಪತ್ರ ಹೊಂದಿರುವ ಪಾಸ್ಟ್ ಚಾಂಪಿಯನ್/ ಕ್ರೀಡಾ ತರಬೇತುದಾರರುಗಳು ಈ ಕೇಂದ್ರ ಸರ್ಕಾರದ ಯೋಜನೆಯ ಅವಕಾಶವನ್ನು ಪಡೆಯಬಹುದಾಗಿದೆ. 

ಕ್ರೀಡಾ ಸಂಸ್ಥೆ/ಶಿಕ್ಷಣ ಸಂಸ್ಥೆಗಳು ಕನಿಷ್ಠ 5 ವರ್ಷಗಳಿಂದ ಕ್ರೀಡೆಯನ್ನು ಉನ್ನತೀಕರಿಸಲು ವಿವಿಧ ಕ್ರೀಡೆಯಲ್ಲಿ ತರಬೇತಿಯನ್ನು ನೀಡಿರುವ ಬಗ್ಗೆ ದಾಖಲೆಗಳೊಂದಿಗೆ  2020ರ ಆಗಸ್ಟ್ 21ರೊಳಗೆ ಅರ್ಜಿ ಸಲ್ಲಿಸುವುದು. 

ಕ್ರೀಡಾ ಸಂಸ್ಥೆ/ ಶಿಕ್ಷಣ ಸಂಸ್ಥೆಗಳು ಕನಿಷ್ಟ 5 ವರ್ಷಗಳಿಂದ ವಿವಿಧ ಕ್ರೀಡೆಗಳನ್ನು ಉನ್ನತೀಕರಿಸಲು ಕ್ರೀಡಾ ತರಬೇತಿಯನ್ನು ನೀಡಿರಬೇಕು, ಕನಿಷ್ಟ ಹಿರಿಯ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಂದ ಕ್ರೀಡಾ ತರಬೇತಿಯನ್ನು ನೀಡಲು ಅರ್ಹರಾಗಿರಬೇಕು,ವಯೋಮಿತಿ 40 ವರ್ಷದೊಳಗಿರಬೇಕು.

ಯೋಜನೆಯ ಮಾರ್ಗಸೂಚಿ ಮತ್ತು ಅರ್ಜಿ ನಮೂನೆಯನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, ಬೆಂಗಳೂರು ಗ್ರಾಮಾಂತರ ಹಾಗೂ ದೂ.ಸಂ.: 9845608598 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!