ಪಶು ಚಿಕಿತ್ಸಾ ವಾಹನಕ್ಕೆ ಸಚಿವ ಪ್ರಭು ಚವ್ಹಾಣ್ ಚಾಲನೆ

ಕಲಬುರಗಿ: ರೋಗಗ್ರಸ್ತ ಜಾನುವಾರುಗಳ ಚಿಕಿತ್ಸೆಗೆ ನೀಡುವ ಸುಸಜ್ಜಿತ ಪಶು ಚಿಕಿತ್ಸಾ ವಾಹನ (ಅಂಬುಲೆನ್ಸ್ ವಾಹನಕ್ಕೆ) ಗುರುವಾರ ಕಲಬುರಗಿಯಲ್ಲಿ ಪಶುಸಂಗೋಪನೆ, ಹಜ್  ಹಾಗೂ ವಕ್ಫ್ ಸಚಿವ ಪ್ರಭು ಚವ್ಹಾಣ್ ಹಳೇ ಐವಾನ –ಎ-ಶಾಹಿ ಅತಿಥಿಗೃಹದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ರೈತರ ಮನೆ ಬಾಗಿಲಿಗೆ ಹೋಗಿ ಜಾನುವಾರುಗಳಿಗೆ ಪಶು ವೈದ್ಯಕೀಯ ಸೇವೆ ನೀಡಲು 2019-20ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯಾದ್ಯಂತ 2 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 15 “ಸುಸಜ್ಜಿತ ಪಶು ಚಿಕಿತ್ಸಾ ವಾಹನ” ನೀಡಲು ಮಂಜೂರಾತಿ ನೀಡಲಾಗಿದ್ದು, ಅದರಂತೆ ಕಲ್ಯಾಣ ಕರ್ನಾಟಕ ಬೀದರ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆ ಒಳಗೊಂಡಂತೆ 15 ಜಿಲ್ಲೆಗಳಿಗೆ ಮೊದಲ ಹಂತದಲ್ಲಿ 15 ವಾಹನಗಳನ್ನು ನೀಡಲಾಗಿದೆ. ಮುಂದಿನ ದಿನದಲ್ಲಿ ಇತರೆ ಜಿಲ್ಲೆಗಳಿಗೂ ಅಂಬುಲೆನ್ಸ್ ವಾಹನ ನೀಡಲಾಗುವುದು ಎಂದರು.

ಸುಸಜ್ಜಿತ ಸಂಚಾರಿ ಪಶು ಶಸ್ತ್ರಚಿಕಿತ್ಸಾ ವಾಹನದಿಂದ ದನ, ಎಮ್ಮೆ, ಕುರಿ, ಮೇಕೆ, ಹಂದಿ, ಇನ್ನಿತರ ಜಾನುವಾರುಗಳಿಗೆ ತಜ್ಞ ಪಶುವೈದ್ಯರ ಮೂಲಕ ತುರ್ತು ಸೇವೆಯನ್ನು ನೀಡಲು ಸಹಕಾರಿಯಾಗಿದೆ ಎಂದ ಸಚಿವರು ಗೋ ಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲಿಯ್ಲೂ ಜಾರಿಗೆ ತರಲು ಮುಖ್ಯಮಂತ್ರಿಗಳ ಜೊತೆಗೆ ಮಾತನಾಡುವುದಾಗಿ ಸಚಿವರು ತಿಳಿಸಿದರು.

ವಾಹನದಲ್ಲಿ ಏನೇನಿದೆ: ಆಧುನಿಕ ಪಶುವೈದ್ಯಕೀಯ ಶಸ್ತ್ರ ಚಿಕಿತ್ಸಾ ಘಟಕ, ಪ್ರಯೋಗ ಶಾಲೆ, ಸ್ಕ್ಯಾನಿಂಗ್ ಉಪಕರಣ ಆಳವಡಿಕೆಗಾಗಿ ಅವಕಾಶ, 250 ಲೀಟರ್ ಸಾಮಥ್ರ್ಯದ ನೀರಿನ ಟ್ಯಾಂಕ್, 200 ಕೆ.ಜಿ. ತೂಕ ಸಾಮಥ್ರ್ಯಧ ಶಸ್ತ್ರ ಚಿಕಿತ್ಸಾ ಟೇಬಲ್, ಎಲ್.ಇ.ಡಿ. ಲೈಟ್, ಆಮ್ಲಜನಕ ಸಪೋರ್ಟ್ ಸಿಸ್ಟಮ್ ಅಳವಡಿಕೆ, ಆಕಸ್ಮಿಕ ಬೆಂಕಿ ಅನಾಹುತ ನಿವಾರಣೆ, ಜಾನುವಾರುಗಳ ಚಿಕಿತ್ಸೆಗೆ ಅತ್ಯವಶ್ಯಕವಾಗಿರುವ ಶಸ್ತ್ರ ಚಿಕಿತ್ಸಾ ಉಪಕರಣ ಕಿಟ್, ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್, ಪ್ರಸೂತಿ ಕಿಟ್‍ಗಳ ಪೆಟ್ಟಿಗೆ ಇದೆ.

ಈ ಸಂದರ್ಭದಲ್ಲಿ ಸಂಸದ ಮತ್ತು ಬಿ.ಜೆ.ಪಿ. ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ವಿಧಾನಸಭೆಯ ಶಾಸಕರಾದ ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಶಾಸಕ ಬಿ.ಜಿ. ಪಾಟೀಲ್, ಮಾಜಿ ಶಾಸಕರಾದ ಮಾಲೀಕಯ್ಯಾ ಗುತ್ತೇದಾರ, ಮಾಜಿ ಎಂ.ಎಲ್.ಸಿ. ಅಮರನಾಥ ಪಾಟೀಲ, ಜಿಲ್ಲಾ ಪಂಚಾಯತ್ ಸದಸ್ಯ ಶಿವರಾಜ ಪಾಟೀಲ ರದ್ದೆವಾಡಗಿ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ವಿ.ಹೆಚ್.ಹನುಮಂತಪ್ಪ ಸೇರಿದಂತೆ ಇನ್ನಿತರರು ಇದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]