ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಆಗಸ್ಟ್ 27 ರಂದು) 38 ಪುರುಷರು ಹಾಗೂ 21 ಮಹಿಳೆಯರು ಸೇರಿದಂತೆ 59 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದೆ.
ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 15 ಪುರುಷರು ಮತ್ತು 6 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 5 ಪುರುಷರು ಮತ್ತು 2 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 6 ಪುರುಷರು ಮತ್ತು 5 ಮಹಿಳೆಯರು ಹಾಗೂ ಬೆಂಗಳೂರು ನಗರ ಮತ್ತು ಇತರೆ ಜಿಲ್ಲೆಗಳಿಗೆ ಸೇರಿದ 2 ಪುರುಷರು ಮತ್ತು 1 ಮಹಿಳೆಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಉಳಿದಂತೆ ಜಿಲ್ಲಾಡಳಿತದ ವರದಿಗೂ ತಾಲೂಕು ದೊಡ್ಡಬಳ್ಳಾಪುರ ತಾಲೂಕು ಆಡಳಿತದ ವರದಿಗೂ ವೆತ್ಯಾಸ ಇರುವ ಕಾರಣ ಹರಿತಲೇಖನಿ ಜಿಲ್ಲಾಡಳಿತ ನೀಡಿರುವ ವರದಿ ಪ್ರಕಟಿಸುತ್ತಿಲ್ಲ.