ದೊಡ್ಡಬಳ್ಳಾಪುರ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21 ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಅಡಿಯಲ್ಲಿ 2019ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟದಲ್ಲಿ ಪದಕ ವಿಜೇತರಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ಪಡೆಯಲಿಚ್ಛಿಸುವ ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಕ್ರೀಡಾಪಟುಗಳು ವೆಬ್ಸೈಟ್
http://karunadu.karnataka.gov.in/dyes ಮೂಲಕ ಅರ್ಜಿ ಸಲ್ಲಿಸಲು, 2020ರ ಸೆಪ್ಟೆಂಬರ್ 10 ಕೊನೆಯ ದಿನವಾಗಿದೆ ಹಾಗೂ ಹಾಗೂ ಸಲ್ಲಿಸಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 205, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-22261789/ 22261787 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.