ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮತ್ತೆ ನಾಲ್ಕು ಮಂದಿ ಕರೊನಾ ಸೋಂಕಿತರ ಸಾವು / ಇಂದು ನಲವತ್ತು ಮಂದಿಗೆ ಸೋಂಕು ದೃಢ / ಇಪ್ಪತ್ತೊಂಬತ್ತು ಜನ ಗುಣಮುಖ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಸದ್ದಿಲ್ಲದೆ ಕರೊನಾ ಸೋಂಕು ತನ್ನ ಉಗ್ರ ಸ್ವರೂಪ ತಾಳಲಾರಂಭಿಸಿದ್ದು ಸಾವಿನ ಸಂಖ್ಯೆ ದಿನೇ ದಿನೆ ಏರಿಕೆಯಾಗುತ್ತಿದೆ.

ಅನಿಯಂತ್ರಿತ ಸಕ್ಕರೆ ಕಾಯಿಲೆ ಹಾಗೂ ಶ್ವಾಸಕೋಶದ ತೊಂದರೆಯಿಂದಾಗಿ ಇಂದು ನಾಲ್ಕು ಮಂದಿ ಕರೊನಾ ಸೋಂಕಿತರು ಸಾವನಪ್ಪುವ ಮೂಲಕ ತಾಲೂಕಿನಲ್ಲಿ ಕರೊನಾ ಸೋಂಕಿತರು ಸಾವನಪ್ಪಿರುವ ಸಂಖ್ಯೆ 30ಕ್ಕೇರಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ್ ಅನ್ವಯ, ಶುಕ್ರವಾರದ ಸಂಜೆಯ ವರಗೆ.20 ಮಂದಿ ಪುರುಷರು ಹಾಗೂ 20 ಮಂದಿ ಮಹಿಳೆಯರು ಸೇರಿ ಒಟ್ಟು ನಲವತ್ತು ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ.

ಆಸ್ಪತ್ರೆಯ ಮೂಲಗಳು ಹರಿತಲೇಖನಿ ನೀಡಿರುವ ಮಾಹಿತಿಯಂತೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ತೂಬಗೆರೆ ವ್ಯಾಪ್ತಿಯ 60 ವರ್ಷದ ಮಹಿಳೆ, ಆಕಾಶ್ ಆಸ್ಪತ್ರೆಗೆ ದಾಖಲಿಸಲಾಗಿದ್ದ ಕಲ್ಲುಪೇಟೆಯ 42 ವರ್ಷದ ಪುರುಷ, ತ್ಯಾಗರಾಜನಗರದ 36 ವರ್ಷದ ಪುರುಷ ಹಾಗೂ ದೇವರಾಜನಗರದ 70 ವರ್ಷದ ಪುರುಷ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಅಲ್ಲದೆ 29 ಮಂದಿ ಸೋಂಕಿನಿಂದ ಗುಣಮುಖರಾಗಿ ಮರಳಿದವರು ಸೇರಿದ್ದಾರೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ,ಟ್ಯಾಂಕ್ ರಸ್ತೆಯಲ್ಲಿ 6, ತೂಬಗೆರೆ 4, ಸೋಮೇಶ್ವರ ಬಡಾವಣೆ 3, ಕೊನಘಟ್ಟ ಆಸ್ಪತ್ರೆಯ ಲ, ಪಾಲನಜೋಗಹಳ್ಳಿ , ದೇವರಾಜನಗರ, ಬ್ರಾಹ್ಮಣರ ಬೀದಿ, ರಾಜೀವ್ ಗಾಂಧಿ ಬಡಾವಣೆ, ಕರೇನಹಳ್ಳಿ, ಪೊಲೀಸ್ ಕ್ವಾಟ್ರಸ್ ಸಮೀಪದ ಮುಗೋಳಪ್ಪ ಬಿಲ್ಡಿಂಗ್ ನಲ್ಲಿ ತಲಾ 2 ಹಾಗೂ ಶಾಂತಿನಗರ, ಮಜರಾಹೊಸಹಳ್ಳಿ, ರಾಜೀವ್ ಗಾಂಧಿ ನಗರ, ಕೊಂಗಾಡಿಯಪ್ಪ ರಸ್ತೆ, ಎಲೆಪುರ, ಚೌಡೇಶ್ವರಿ ಬೀದಿ, ಬಾಶೆಟ್ಟಿಹಳ್ಳಿ, ವಿದ್ಯಾನಗರ, ಮಂಗಳ ಶಾಲೆ ಸಮೀಪ, ಕೊನಘಟ್ಟ, ಸೊಣ್ಣೆನಹಳ್ಳಿ ಮತ್ತು ರೈಲ್ವೇ ಸ್ಟೇಷನ್ ಬಳಿ ತಲಾ ಒಬ್ಬರಲ್ಲಿ ಸೊಂಕು ದೃಡಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 1063 ಮಂದಿಗೆ ಸೋಂಕು ತಗುಲಿದ್ದು,750 ಮಂದಿ ಗುಣಮುಖರಾಗಿದ್ದರೆ 30 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 55 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 228 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

[ccc_my_favorite_select_button post_id="119574"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!