ದೊಡ್ಡಬಳ್ಳಾಪುರ: ತಾಲೂಕು ರೈತ ಮೋರ್ಚಾ ಅಧ್ಯಕ್ಷರಾಗಿದ್ದ ವೆಂಕಟೇಶ್(55) ಅನಾರೋಗ್ಯದ ಕಾರಣ ಇಂದು ಚಿಕಿತ್ಸೆಗೆ ತೆರಳುವ ಮಾರ್ಗಮಧ್ಯದಲ್ಲಿ ಸಾವನಪ್ಪಿದ್ದಾರೆ.
ಮೃತರು ಮಡದಿ ಹಾಗೂ ಮಗನನ್ನು ಅಗಲಿದ್ದಾರೆ.ದೊಡ್ಡಬಳ್ಳಾಪುರ ತಾಲೂಕು ಭಾರತೀಯ ಜನತಾ ಪಾರ್ಟಿ ರೈತ ಮೋರ್ಚ ಅಧ್ಯಕ್ಷರಾಗಿ ಹಾಗೂ ತಾಲೂಕು ಮಟ್ಟದ ಸರ್ಕಾರಿ ಆಸ್ಪತ್ರೆಯ ಆರೋಗ್ಯ ಸಮಿತಿಗೆ ನಾಮ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಕೋವಿಡ್-19 ಸಂದರ್ಭದಲ್ಲಿ ಹೂ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವಂತೆ ನಡೆದ ಹೋರಾಟದಲ್ಲಿ ವೆಂಕಟೇಶ್ ಸಕ್ರಿಯವಾಗಿ ಭಾಗವಹಿಸಿದ್ದರು.
ವೆಂಕಟೇಶ್ ಅವರ ಅಕಾಲಿಕ ಮರಣಕ್ಕೆ ವಿವಿಧ ಪಕ್ಷದ ಗಣ್ಯರು ಕಂಬನಿ ಮಿಡಿದಿದ್ದಾರೆ.