ಹೈನುಗಾರಿಕೆಯಿಂದ ಮಾತ್ರ ರೈತರಿಗೆ ನಿಗದಿತ ಆದಾಯ: ಬಿ.ಸಿ.ಆನಂದಕುಮಾರ್‌

ದೊಡ್ಡಬಳ್ಳಾಪುರ: ಹೋಟಲ್‌, ಶುಭಸಮಾರಂಭಗಳು ಇಲ್ಲದೆ ಇರುವುದರಿಂದ ಲಾಕ್‌ಡೌನ್‌ ನಂತರ ಹಾಲಿನ ಮಾರಾಟ ಗಣನೀಯವಾಗಿ ಕಡಿಮೆಯಾಗಿದೆ. ಹೀಗಾಗಿ ರೈತರಿಂದ ಖರೀದಿಸುವ ಹಾಲಿನ ಬೆಲೆ ಅನಿವಾರ್ಯವಾಗಿ ಇಳಿಸಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ಮತ್ತೆ ಹಾಲಿನ ಬೆಲೆ ಏರಿಕೆಯಾಗಲಿದೆ ಎಂದು ಕೆಎಂಎಫ್‌ ನಿರ್ದೆಶಕ ಬಿ.ಸಿ.ಆನಂದಕುಮಾರ್‌ ಹೇಳಿದರು.

ಅವರು ತಾಲ್ಲೂಕಿನ ಲಕ್ಷ್ಮೀದೇವಿಪುರ ಹಾಲು ಉತ್ದಾಕರ ಸಹಕಾರ ಸಂಘದ ವತಿಯಿಂದ ನಡೆದ ಬರಡು ರಾಸುಗಳ ಆರೋಗ್ಯ ತಪಾಸಣ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಲಾಭ ಕಡಿಮೆಯಾಗಿದ್ದರು ಸಹ ರೈತರಿಗೆ ಇಂದಿಗೂ ನಿಗದಿತವಾಗಿ ಹಣ ಬರುತ್ತಿರುವುದು ಹೈನುಗಾರಿಕೆಯಲ್ಲಿ ಮಾತ್ರ. ಹೀಗಾಗಿ ರೈತರು ಕೃಷಿಯೊಂದಿಗೆ ಹೈನುಗಾರಿಕೆಯನ್ನು ಹೊಂದಿರಲೇ ಬೇಕು. ಇದರಿಂದ ಕೃಷಿ ಭೂಮಿಯ ಫಲವತ್ತತೆಗೆ ಅಗತ್ಯ ಇರುವ ಗೊಬ್ಬರ ದೊರೆಯಲಿದ್ದು ಸರಗೊಬ್ಬರದ ಮೇಲಿನ ಅವಲಂಭನೆಯು ಕಡಿಮೆಯಾಗಲಿದೆ ಎಂದರು.

ರೈತರು ರಾಸುಗಳನ್ನು ವೈಜ್ಞಾನಿಕವಾಗಿ ಸಾಕಾಣಿಕೆ ಮಾಡುವ ಕಡೆಗೆ ತಿಳುವಳಿಕೆ ಪಡೆಯಬೇಕು. ರಾಸುಗಳಿಗೆ ಸಕಾಲಕ್ಕೆ ಸಾಮೂಹಿಕವಾಗಿ ಲಸಿಕೆಗಳನ್ನು ಹಾಕಿಸುವುದರಿಂದ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವುದು ತಪ್ಪಲಿದೆ. ಅಕಾಲಿಕವಾಗಿ ರಾಸುಗಳು ಮೃತಪಟ್ಟರೆ ರೈತರು ನಷ್ಟಕ್ಕೆ ಒಳಗಾಗದಂತೆ ಬಮೂಲ್‌ನಿಂದ ರಾಸುಗಳಿಗೆ ವಿಮೆ ಜಾರಿಗೆ ತರಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಹಾಲು ಶೀಥಲ ಕೇಂದ್ರದ ವ್ಯವಸ್ಥಾಪಕ ಡಾ.ಗೋಪಾಲಕೃಷ್ಣ, ಉಪವ್ಯವಸ್ಥಾಪಕ ಎಲ್‌.ಬಿ.ನಾಗರಾಜ್‌, ಲಕ್ಷ್ಮೀದೇವಿಪುರ ಎಂಪಿಸಿಎಸ್‌ ಅಧ್ಯಕ್ಷ ಶಿವಕುಮಾರ್‌, ಕಾರ್ಯದರ್ಶಿ ಶಿವರಾಜ್‌, ಯುವ ಮುಖಂಡ ಅಂಬರೀಶ್‌ ಇದ್ದರು.

ರಾಜಕೀಯ

ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ನಡೆಸಲು ಚುನಾವಣೆ ವೇಳಾಪಟ್ಟಿ ಪ್ರಕಟ

ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ನಡೆಸಲು ಚುನಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಯನ್ನು ರಚಿಸುವ ಸಲುವಾಗಿ ನಗರ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದಿಂದ ಖಾಲಿ ಇರುವ 10 ಸ್ಥಾನಗಳಿಗೆ ಸದಸ್ಯರನ್ನು ಆಯ್ಕೆ ಮಾಡುವ ಸಂಬಂಧ ಜಿಲ್ಲಾ ಯೋಜನಾ ಸಮಿತಿ ಚುನಾವಣೆ-2026 ರ

[ccc_my_favorite_select_button post_id="119273"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!