ಬಳ್ಳಾರಿ: ಜಿಲ್ಲಾಸ್ಪತ್ರೆ ವೈದ್ಯರ ತಂಡ ಕಳೆದೆರಡು ತಿಂಗಳುಗಳಿಂದ 100 ಕೋವಿಡ್ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿ ವಿಶೇಷ ಸಾಧನೆ ಮಾಡಿದೆ.
ಕೋವಿಡ್-19 ನಂತಹ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೇ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ವೈದ್ಯರಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.ಆರೋಗ್ಯ ಸಚಿವ ಶ್ರೀ ರಾಮುಲು ಸಹ ಅಭಿನಂದನೆ ಸಲ್ಲಿಸಿದ್ದಾರೆ.