ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಗೆ ಅಗತ್ಯ ಕ್ರಮ ಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಡಾ:ಜಗದೀಶ್.ಕೆ.ನಾಯಕ್ ಸೂಚನೆ

ದೊಡ್ಡಬಳ್ಳಾಪುರ: ಸೆಪ್ಟಂಬರ್ 7 ರಿಂದ 18 ರವರೆಗೆ ನಡೆಯಲಿರುವ ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಗೆ, ಜಿಲ್ಲೆಯ 2500 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷೆಯು ಸುಸೂತ್ರವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ:ಜಗದೀಶ್.ಕೆ.ನಾಯಕ್ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ, “2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ವ್ಯವ್ಯಸ್ಥಿತವಾಗಿ ನಡೆಸಲು ಪೂರ್ವಸಿದ್ಧತಾ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊರೋನಾ ವೈರಾಣು ಸೋಂಕು ಭೀತಿ ಹಿನ್ನಲೆ, ಪರೀಕ್ಷೆಗೆ ಹಾಜರಾಗುವ ಮಕ್ಕಳ ಆರೋಗ್ಯ ಸುರಕ್ಷತಾ ದೃಷ್ಟಿಯಿಂದ ಪರೀಕ್ಷೆ ನಡೆಯಲಿರುವ ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳನ್ನು ಹಾಗೂ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಆವರಣವನ್ನು ಸ್ಯಾನಿಟೈಜ್ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ದ್ವೀತಿಯ ಪಿ.ಯು.ಸಿ. ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾಸ್ಕ್‌ಗಳನ್ನು ನೀಡಬೇಕು. ಪ್ರತಿ ವಿದ್ಯಾರ್ಥಿಗಳಿಗೆ ಸ್ಯಾನಿಟೈಜ್ ನೀಡಿ ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ನಡೆಸಿ ನಂತರ ಪರೀಕ್ಷಾ ಕೊಠಡಿಗೆ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು. 

ಜಿಲ್ಲೆಯಲ್ಲಿ ದ್ವೀತಿಯ ಪಿ.ಯು.ಸಿ. ಪೂರಕ ಪರೀಕ್ಷೆ ನಡೆಯಲಿರುವ ಒಟ್ಟು 4 ಪರೀಕ್ಷಾ ಕೇಂದ್ರಗಳ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಹೊರಡಿಸಲಾಗುವುದು. ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯೊಳಗೆ ವಿದ್ಯಾರ್ಥಿಗಳ ಪಾಲಕರೂ ಪ್ರವೇಶಿಸುವಂತಿಲ್ಲ ಎಂದರು.

ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳನ್ನು ಪ್ರವೇಶಿಸುವಾಗ ಹಾಗೂ ಮರಳಿ ಹೋಗುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳವಂತೆ ಶಿಕ್ಷಕರು ನಿಗಾವಹಿಸಬೇಕು, ಅಲ್ಲದೆ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳು ಉತ್ತಮವಾಗಿರುವಂತೆ ಕ್ರಮ ವಹಿಸಲು ತಿಳಿಸಿದರು.

ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವತಿಯಿಂದ 4 ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್‌ನೊದಿಂಗೆ  ಪರೀಕ್ಷಾ ಕಾರ್ಯಗಳಿಗೆ ವಾಹನ ಸೌಕರ್ಯ ಕಲ್ಪಿಸಲಾಗುವುದು ಎಂದು ಹೇಳಿದರು. 

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಪದವಿ  ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!