ದೊಡ್ಡಬಳ್ಳಾಪುರ: ಕೋವಿಡ್-19/ ಕರೊನಾ ವೈರಾಣು ಸೋಂಕು ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ “ಕ್ರೀಡಾ ಕ್ಷೇತ್ರದ ಮಹಾನ್ ದಿಗ್ಗಜ, ಹಾಕಿ ಮಾಂತ್ರಿಕ, ಮೇಜರ್ ಧ್ಯಾನ್‌ಚಂದ್‌ರವರ ಜನ್ಮ ದಿನದ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆ”ಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
“ಹಾಕಿ ದಂತಕಥೆ, ಮೇಜರ್ ಧ್ಯಾನ್‌ಚಂದ್” ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಡಾ:ಜಗದೀಶ್.ಕೆ.ನಾಯಕ್ ಅವರು ಪುಷ್ಪನಮನದ ಮೂಲಕ ಗೌರವ ವಂದನೆ ಸಲ್ಲಿಸಿದರು.
ಖಜಾನೆ ಇಲಾಖೆ ಉಪನಿರ್ದೇಶಕಿ ನಂದಿನಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಮುನಿಯಪ್ಪ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ನಾರಾಯಣ್, ದೈಹಿಕ ಶಿಕ್ಷಕ ಮುರುಗೇಶ್, ಕುಸ್ತಿ ಪೈಲ್ವಾನ್ ಮಂಜುನಾಥ್, ಅಂತರರಾಷ್ಟ್ರೀಯ ಕ್ರೀಡಾಪಟು ರಂಜಿತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಯವರ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.