ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಶನಿವಾರದ ಬುಲೆಟಿನ್ ಮಾಹಿತಿಯಂತೆ ತಾಲೂಕಿನ ಇಪ್ಪತ್ತಾರು ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ.
ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ,ಶನಿವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 17 ಪುರುಷರು ಹಾಗೂ 9 ಮಹಿಳೆಯರು ಸೇರಿ 26 ಜನರಿಗೆ ಸೋಂಕು ದೃಡಪಟ್ಟಿದೆ.
ಹರಿತಲೇಖನಿಗೆ ದೊರಕಿರುವ ವರದಿಯಂತೆ.ಟಫೆ ಕಾರ್ಖಾನೆಯ 4, ಕರೇನಹಳ್ಳಿಯಲ್ಲಿ 3, ತ್ಯಾಗರಾಜನಗರ, ಸಂಜಯನಗರ, ಸಿದ್ದೆನಾಯಕನಹಳ್ಳಿ 2 ಹಾಗೂ ತಾಲೂಕು ಕಚೇರಿ, ಖಾಸ್ ಬಾಗ್, ತೂಬಗೆರೆ, ಶೆಟ್ಟರ ಬೀದಿ, ಮಾರುತಿನಗರ, ಕುಂಬಾರಪೇಟೆ, ತಿಪ್ಪೂರು, ಸರ್ಕಾರಿ ಆಸ್ಪತ್ರೆ ಕ್ವಾಟ್ರಸ್, ಎಪಿಎಂಸಿ ಮಾರುಕಟ್ಟೆ, ಮಲ್ಲತ್ ಹಳ್ಳಿ, ಸೋಮೇಶ್ವರ ಬಡಾವಣೆ, ಮೇಡಿಹಳ್ಳಿ ಮತ್ತು ಮಧುರೆಯ ಕಲ್ಲೂಡಿನಲ್ಲಿ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.
ಪ್ರಸ್ತುತ ತಾಲೂಕಿನಲ್ಲಿ 1089 ಮಂದಿಗೆ ಸೋಂಕು ತಗುಲಿದ್ದು, 750 ಮಂದಿ ಗುಣಮುಖರಾಗಿದ್ದರೆ 30 ಮಂದಿ ಸಾವನಪ್ಪಿದ್ದಾರೆ.
ಸೋಂಕಿಗೆ ಒಳಗಾದ 55 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 254 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.