ಇನ್ಸ್ಪೆಕ್ಟರ್ ದೇವಿಕಾದೇವಿ ಕಾರ್ಯಾಚರಣೆ / ದರೊಡೆಗೆ ಯತ್ನಿಸುತ್ತಿದ್ದವರ ಬಂಧನ,ಮಾರಕಾಸ್ತ್ರಗಳ ವಶ

ಬೆಂಗಳೂರು: ನೆಲಮಂಗಲ ಉಪವಿಭಾಗ,ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ದರೊಡೆಗೆ ಯತ್ನಿಸುತ್ತಿದ್ದ ನಾಲ್ಕು ಜನ ಆರೋಪಿತರನ್ನು ಬಂಧಿಸಿ ಅವರ ಬಳಿಯಿದ್ದ ಮಾರಕಾಸ್ತ್ರಗಳನ್ನು  ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಶನಿವಾರ 29 ನಸುಕಿನಲ್ಲಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೇವಿಕಾದೇವಿ ನೈಟ್ ರೌಂಡ್ಸ್ ಕರ್ತವ್ಯದಲ್ಲಿರುವಾಗ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ಲಕ್ಷ್ಮೀಪುರ ಗಂಗೊಂಡನಹಳ್ಳಿ ರಸ್ತೆಯಲ್ಲಿ ಎಂಟು ಜನ ಆಸಾಮಿಗಳು ಗುಂಪು ಗೂಡಿಸಿಕೊಂಡು ಕೈಗಳಲ್ಲಿ ಮರಕಾಸ್ತ್ರಗಳನ್ನು ಹಿಡಿದುಕೊಂಡು ದರೋಡೆ ಮಾಡಲು ಹೊಂಚು ಹಾಕಿಕೊಂಡು ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗಾಗಿ ಕಾಯುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಆಸಾಮಿಗಳು ದರೊಡೆಗೆ ಯತ್ನಿಸುತ್ತಿದ್ದ ಸ್ಥಳಕ್ಕೆ ಧಾವಿಸಿ ಅಲ್ಲಿದ್ದ ಎಂಟು ಜನ ಆರೋಪಿತರ ಪೈಕಿ ನಾಲ್ಕು ಜನರನ್ನು ಹಿಡಿದುಕೊಂಡು ವಶಕ್ಕೆ ಪಡೆದು ಆರೋಪಿಗಳು ದರೊಡೆಗಾಗಿ ತಂದಿದ್ದ  ಒಂದು ರಾಡು, ಎರಡು ಚಾಕು, ಒಂದು ದೊಣ್ಣೆ, ಹಾಗೂ ಖಾರದ ಪುಡಿಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿರುತ್ತದೆ.

ದಸ್ತಗಿರಿ ಮಾಡಿರುವ ಆರೋಪಿಗಳ ವಿವರ: ಪಾಂಡವಪುರ ತಾಲೂಕಿನ ಮಾಚೋಹಳ್ಳಿ ಕಾಲೋನಿ,  ವಿನಯ್ ಕುಮಾರ್ ಅಲಿಯಾಸ್ ವಿನಿ (23) ವರ್ಷ. ದಾಸನಪುರ ಹೋಬಳಿಯ,ದೊಂಬರಹಳ್ಳಿ ಗ್ರಾಮದ ರವಿಕಿರಣ್ ಲಿಯಾಸ್ ಲೂಸ್ ಬಿನ್ ಸುರೇಶ್ ಕುಮಾರ್(24), ಭರತ್ (19),  ಚೇತನ್ ಅಲಿಯಾಸ್ ಚೇತು (25)

ತಲೆಮರೆಸಿಕೊಂಡಿರುವವರ ವಿವರ: ದೊಂಬರಹಳ್ಳಿ ಗ್ರಾಮದ ಅವಿನಾಶ್, ಕೆ. ಪಿ. ಅಗ್ರಹಾರದ ಇರ್ಫಾನ್, ಅಬ್ಬು, ಅರಿಶಿನಕುಂಟೆ ಯೋಗೇಶ್.

ಕಾರ್ಯಾಚರಣೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ ಡಿ.ಚನ್ನಣ್ಣನವರ್,ಐ. ಪಿ. ಎಸ್. ಮತ್ತು ಅಪರ ಪೊಲೀಸ್ ಅಧೀಕ್ಷಕ  ಲಕ್ಷ್ಮಿಗಣೇಶ್, ನೆಲಮಂಗಲ ಉಪವಿಭಾಗದ  ಪೊಲೀಸ್ ಉಪಾಧೀಕ್ಷಕ ಬಿ.ಎಸ್.ಮೋಹನ್ ಅವರ ಮಾರ್ಗದರ್ಶನದಲ್ಲಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ .ಸತ್ಯನಾರಾಯಣ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೇವಿಕಾದೇವಿ, ಸಿಬಂದಿಗಳಾದ ನಾರಾಯಣಸ್ವಾಮಿ, ಮಲ್ಲಗೊಂಡಿ, ಗಂಗಾಧರ್,  ಶಿವಕುಮಾರ್, ಲಕ್ಷ್ಮಣ್, ಫರ್ವೀಜ್ ಪಾಷಾ, ಇಮ್ರಾನ್ ಖಾನ್, ಶಿವಪ್ಪ ಎಸ್ ಗೌಡರ, ಸಂಜಯ್ ರವರನ್ನು ಒಳಗೊಂಡ ತಂಡ ಆರೋಪಿಗಳನ್ನು ದಸ್ತಗಿರಿ ಮಾಡಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಸದರಿ ಕಾರ್ಯಾಚರಣೆಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.

ರಾಜಕೀಯ

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಮಹಿಳಾ ಮೀಸಲಾತಿ (Women's reservation Bill) ಮಸೂದೆಗೆ ಸಂಬಂಧಿಸಿದ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಸಂಸತ್ತಿನಲ್ಲಿ ಸೋಲಾಗಿದ್ದು, ಇದೇ ಮೊದಲ ಬಾರಿಗೆ ಮಸೂದೆಯನ್ನು ಅಂಗೀಕರಿಸುವಲ್ಲಿ ಮೋದಿ (Modi) ಸರ್ಕಾರ ವಿಫಲವಾಗಿ, ಮುಖಭಂಗಕ್ಕೀಡಾಗಿದೆ.

[ccc_my_favorite_select_button post_id="121067"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!