ಎಸ್ಸೆಸ್ಸೆಲ್ಸಿಯಿಂದಲೇ ಸ್ಪರ್ಧಾತ್ಮಕ ಪರೀಕ್ಷಾತಯಾರಿ ಅಗತ್ಯ: ಸಿ.ಎಸ್.ಕರೀಗೌಡ

ದೊಡ್ಡಬಳ್ಳಾಪುರ : ವಿದ್ಯಾರ್ಥಿಗಳು ತಮ್ಮ ಪ್ರೌಢ ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯೂಪಿಎಸ್ಸಿ, ಕೆಪಿಎಸ್ಸಿಗೆ ತಯಾರಿ ಅಗತ್ಯವಾಗಿದ್ದು, ದೊಡ್ಡಬಳ್ಳಾಪುರದಲ್ಲಿ ವಿವೇಕ್ ವಿಷನ್ ಕ್ಲಾಸಸ್ ಪ್ರಯತ್ನ ಸ್ವಾಗತಾರ್ಹ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸಿ.ಎಸ್.ಕರೀಗೌಡ ಹೇಳಿದರು. 

ನಗರದ ಹೇಮಾವತಿಪೇಟೆಯಲ್ಲಿನ ವಿವೇಕ್ ವಿಷನ್ ಕ್ಲಾಸಸ್‍ನಲ್ಲಿ ಭಾನುವಾರ ಸರಕಾರಿ ಶಾಲಾವಿದ್ಯಾರ್ಥಿಗಳ ಪ್ರತಿಭಾಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಗ್ರಾಮೀಣ ಪ್ರದೇಶದಲ್ಲಿನ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಯಾವುದೇ ಕೀಳರಿಮೆಯಿಲ್ಲದೆ, ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಆ ಮೂಲಕ ಭವಿಷ್ಯದಲ್ಲಿ ಅತ್ಯುನ್ನತ ಹುದ್ದೆಗಳನ್ನಲಂಕರಿಸುವ ಬೃಹತ್ ಕನಸುಗಳನ್ನು ಕಾಣಬೇಕು. ವಿದ್ಯಾರ್ಥಿ ವಯಸ್ಸಿನಲ್ಲಿ ಯಾವುದೇ ವ್ಯಾಮೋಹಗಳಿಗೆ ಒಳಗಾಗದೆ, ಸದೃಢವಾದ ಭವಿಷ್ಯ ನಿರ್ಮಿಸಿಕೊಳ್ಳಲು ಪ್ರಯತ್ನಿಸಬೇಕು. ಕನಸುಗಳ ಸಾಕಾರಕ್ಕೆ ಅಗತ್ಯ ಬೀಳುವ ಪರಿಶ್ರಮವನ್ನು ನಂಬಿ ಮುನ್ನಡೆದರೆ ಯಶಸ್ಸು ಸಿಗುವುದು ಖಚಿತ. ಅತಿಮುಖ್ಯವಾಗಿ ವಿದ್ಯಾರ್ಥಿಗಳು ಸರಳತೆಯನ್ನು ಮೈಗೂಡಿಸಿಕೊಳ್ಳಬೇಕು. ಜೀವನದ ಸಾಧನೆಗಳಿಗೆ ಸುತ್ತಲಿನ ಪರಿಸರ ಹೆಚ್ಚಿನ ಪರಿಣಾಮ ಬೀರುತ್ತದೆ ಎಂದರು. 

ವಿವೇಕ್ ವಿಷನ್ ಕ್ಲಾಸಸ್‍ನ ವ್ಯವಸ್ಥಾಪಕ ನಿರ್ದೇಶಕ ಎ.ನಾಗರಾಜ್ ಮಾತನಾಡಿ, ಕಳೆದ ವರ್ಷ ದೊಡ್ಡಬಳ್ಳಾಪುರ ನಗರದ ಅರಳುಮಲ್ಲಿಗೆ ಬಾಗಿಲು ಸರಕಾರಿ ಶಾಲೆ, ಬಾಶೆಟ್ಟಿಹಳ್ಳಿ ಸರಕಾರಿ ಶಾಲೆ, ಸರಕಾರಿ ಜ್ಯೂನಿಯರ್ ಪ್ರೌಢ ಶಾಲೆ ಹಾಗೂ ಶ್ರೀಕೊಂಗಾಡಿಯಪ್ಪ ಪ್ರೌಢ ಶಾಲೆಯಲ್ಲಿ 50ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಟಾರ್ಗೆಟ್-625 ಹೆಸರಿನಡಿ ಪರೀಕ್ಷೆಗಳನ್ನು ನೀಡಲಾಗಿತ್ತು. ಅನಂತರ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಮತ್ತು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾದ ಸಾಕಷ್ಟು ಮಾಹಿತಿಗಳನ್ನು ನೀಡಲಾಗಿತ್ತು. ಈ ವಿದ್ಯಾರ್ಥಿಗಳಲ್ಲಿ 25ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 2020-21ನೇ ಶೈಕ್ಷಣಿಕ ವರ್ಷದಲ್ಲು ಸರಕಾರಿ ಶಾಲೆಯ 30ವಿದ್ಯಾರ್ಥಿಗಳಿಗೆ  ಸೂಪರ್-30 ಯೋಜನೆಯಡಿ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂದರು. 

ಕಾರ್ಯಕ್ರಮದಲ್ಲಿ ಪರಿಸರ ಸಿರಿ ತಂಡದ ರಾಜಶೇಖರ್, ಮಾಜಿ ಕಸಾಪ ಅಧ್ಯಕ್ಷ ಶ್ರೀಕಾಂತ್, ವಿವೇಕ್ ವಿಷನ್ ಕ್ಲಾಸಸ್ ಸಂಸ್ಥೆಯ ಶಿಕ್ಷಕರಾದ ಅನಿಲ್, ಆದರ್ಶ್, ಲಕ್ಷ್ಮಿಶ್ರೀನಿವಾಸ್, ಲತಾ, ರಘುವರ್ಧನ್‍ರಾವ್, ಯಶ್ವಂತ್ ಸೇರಿದಂತೆ ಇತರರು ಹಾಜರಿದ್ದರು. 

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!