ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಆಗಸ್ಟ್ 30 ರಂದು) 39 ಪುರುಷರು ಹಾಗೂ 16 ಮಹಿಳೆಯರು ಸೇರಿದಂತೆ 55 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.
ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 7 ಪುರುಷರು ಮತ್ತು 6 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 5 ಪುರುಷರು ಮತ್ತು 1 ಮಹಿಳೆಯಲ್ಲಿ, ದೇವನಹಳ್ಳಿ ತಾಲ್ಲೂಕಿನಲ್ಲಿ 9 ಪುರುಷರು ಮತ್ತು 2 ಮಹಿಳೆಯರು ಕೋವಿಡ್ ಸೋಂಕು ದೃಢಪಟ್ಟಿದೆ.
*ಎರಡು ಸಾವು*
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 72 ವರ್ಷದ ವೃದ್ದೆ ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ 65 ವರ್ಷದ ವ್ಯಕ್ತಿಯೊಬ್ಬರು ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನ ವರದಿ ಗೊಂದಲ ಮುಂದುವೆರೆದಿದ್ದು ಹರಿತಲೇಖನಿ ಪ್ರಕಟಿಸುತ್ತಿಲ್ಲ.