ಹೂಡಿಕೆದಾರರ ಸಮಾವೇಶ ಮತ್ತು ರೋಡ್ -ಶೋ ಹೂಡಿಕೆದಾರರ ಸಮಾವೇಶ ಮತ್ತು ರೋಡ್ -ಶೋ: ಸಚಿವ ಜಗದೀಶ ಶೆಟ್ಟರ್

ಕಲಬುರಗಿ : ರಸ್ತೆ, ರೈಲು, ವಾಯು ಸಂಪರ್ಕ ಸೇರಿದಂತೆ ಉತ್ತಮ ಮೂಲಸೌಕರ್ಯ ಹೊಂದಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಹೂಡಿಕೆಗೆ ಕೈಗಾರಿಕೋದ್ಯಮಿಗಳನ್ನು ಆಕರ್ಷಿಸಲು ಮುಂದಿನ ದಿನದಲ್ಲಿ ಕಲಬುರಗಿಯಲ್ಲಿ ಹೂಡಿಕೆದಾರರ ಸಮಾವೇಶ ಆಯೋಜನೆ ಮತ್ತು ರೋಡ್-ಶೋ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಘೋಷಿಸಿದರು.

ಸೋಮವಾರ ಇಲ್ಲಿನ ಹೆಚ್.ಕೆ.ಸಿ.ಸಿ.ಐ. ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಕೈಗಾರಿಕೆ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಹೆಚ್.ಕೆ.ಸಿ.ಸಿ.ಐ ಇವರ ಸಂಯುಕ್ತಾಶ್ರಯದಲ್ಲಿ “ವಾಣಿಜ್ಯೋದ್ಯಮಿಗಳೊಂದಿಗೆ ಸಚಿವರ ಸಂವಾದ”ದಲ್ಲಿ ಉದ್ಯಮಿ ಸಂತೋಷ ಲಂಗರ ಅವರ ಮನವಿಗೆ ಸಚಿವರು ಪ್ರತಿಕ್ರಿಯೆಸಿ ಮಾತನಾಡಿದರು.

ಸ್ಥಳೀಯ ಉದ್ಯಮಿಗಳ ಜೊತೆ ಇತರೆ ಭಾಗದ ಉದ್ಯಮಿಗಳನ್ನು ಸರ್ಕಾರ ಒದಗಿಸುತ್ತಿರುವ ಮೂಲಸೌಕರ್ಯ ಸೇವೆಗಳ ಬಗ್ಗೆ ಮನವೊಲಿಸಲು  ಇಂತಹ ಸಮಾವೇಶ ಮತ್ತು ರೋಡ್ ಶೋ ಸಹಕಾರಿಯಾಗಲಿದೆ. ಹುಬ್ಬಳ್ಳಿ ಸಮಾವೇಶದ ಫಲವಾಗಿಯೇ ಯಾದಗಿರಿ ಕಡೇಚೂರನಲ್ಲಿ ಸುಮಾರು 15 ಫಾರ್ಮ ಉದ್ಯಮಗಳ ಸ್ಥಾಪನೆಗೆ ಮಂಜೂರಾತಿ ನೀಡಲಾಗಿದೆ ಎಂದರು.

ರಾಜ್ಯದ ಇತರೆ ಎಸ್ಕಾಂ ಸಂಸ್ಥೆಗಳು ವಿದ್ಯುತ್ ಕಂಬಗಳನ್ನು ಸ್ಥಳೀಯ ಉದ್ಯಮಿಗಳಿಂದ ಮಾತ್ರ ಖರೀದಿಸುತ್ತಿದೆ. ಆದರೆ ಇಲ್ಲಿನ ಜೆಸ್ಕಾಂ ಸಂಸ್ಥೆ ರಾಜ್ಯದ ಎಲ್ಲಾ ವಿದ್ಯುತ್ ಉತ್ಪಾದನಾ ಗುತ್ತೆಗಾದಾರರಿಂದ ವಿದ್ಯುತ್ ಕಂಬ ಖರೀದಿಸುತ್ತಿದೆ. ಇದರಿಂದ ಸ್ಥಳೀಯ ಉದ್ಯಮಿದಾರರಾದ ನಮಗೆ ಅನ್ಯಾಯವಾಗುತ್ತಿದ್ದು, ಈ ಬಗ್ಗೆ ಗಮನಹರಿಸಬೇಕು ಎಂದರು. ಸಚಿವ ಜಗದೀಶ ಶೆಟ್ಟರ್ ಮಾತನಾಡಿ ಈ ಸಂಬಂಧ ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಉದ್ಯಮಿ ಸುರೇಶ ಜಿ. ನಂದ್ಯಾಳ ಮಾತನಾಡಿ ಹೊಸದಾಗಿ ಘೋಸಿರುವ ಕೈಗಾರಿಕಾ ನೀತಿ ದೇಶದಲ್ಲಿಯೇ ಉತ್ತಮ ನೀತಿಯಾಗಿದೆ. ಆದರೆ ಇದನ್ನು ಮುಂದಿನ 5 ವರ್ಷದ ವರೆಗೆ ಚಾಲ್ತಿಯಲ್ಲಿಟ್ಟು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು ಎಂದರು.

ಮಹಿಳಾ ಉದ್ಯಮಿ ವಿಜಯಲಕ್ಷ್ಮಿ ಮಾತನಾಡಿ ನಂದೂರ-ಕೆಸರಟಗಿ ಕೈಗಾರಿಕಾ ಪ್ರದೇಶದ ಮಹಿಳಾ ಪಾರ್ಕ್‍ನಲ್ಲಿ ಉದ್ಯಮ ಸ್ಥಾಪನೆಗೆ ಮಹಿಳಾ ಉದ್ಯಮಿಗಳು ಮುಂದೆ ಬಂದಿದ್ದಾರೆ. ಸೂಕ್ತ ಮೂಲಸೌಕರ್ಯ ಮತ್ತು ಮಹಿಳಾ ಉದ್ಯಮಿಗಳಿಗೆ ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು. ಸಂವಾದದಲ್ಲಿ ಅನೇಕ ಯುವ ಮತ್ತು ಹಿರಿಯ ಉದ್ಯಮಿಗಳು ತಮ್ಮ ಸಮಸ್ಯೆಗಳನ್ನು ಸಚಿವರ ಮುಂದೆ ಹೇಳಿಕೊಂಡರು.

ಸಂವಾದದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಮತ್ತಿಮೂಡ, ಸುಭಾಷ ಗುತ್ತೇದಾರ, ವಿಧಾನ ಪರಿಷತ್ತಿನ ಶಾಸಕರಾದ ಬಿ.ಜಿ.ಪಾಟೀಲ, ಸುನೀಲ ವಲ್ಯಾಪುರೆ, ಮಾಜಿ ಎಂ.ಎಲ್.ಸಿ. ಶಶೀಲ್ ಜಿ. ನಮೋಶಿ, ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ,  ಹೆಚ್.ಕೆ.ಸಿ.ಸಿ.ಐ. ಅಧ್ಯಕ್ಷ ಅಮರನಾಥ ಸಿ. ಪಾಟೀಲ, ಕೆ.ಐ.ಎ.ಡಿ.ಬಿ. ಸಿ.ಇ.ಓ ಡಾ.ಎನ್.ಶಿವಶಂಕರ, ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಾಣಿಕ ವಿ. ರಘೋಜಿ ಇದ್ದರು.

ರಾಜಕೀಯ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ (Internal reservation) ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ

[ccc_my_favorite_select_button post_id="121345"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]