ದೊಡ್ಡಬಳ್ಳಾಪುರ: ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ 2020ರ ಸಂಬಂಧ ದಿನಾಂಕ: 02-03-2020ರ ರಾಜ್ಯ ಚುನಾವಣಾ ಆಯೋಗದ ಸುತ್ತೋಲೆಯಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕುಗಳ ಹಾಲಿ ಅವಧಿ ಮುಕ್ತಾಯವಾಗಿರುವ ಗ್ರಾಮ ಪಂಚಾಯತಿಗಳ ಕ್ಷೇತ್ರವಾರು ಅಂತಿಮ ಮತದಾರರ ಪಟ್ಟಿಗಳನ್ನು ತಯಾರಿಸಿ 2020ರ ಆಗಸ್ಟ್ 31 ರಂದು ಆಯಾ ತಾಲ್ಲೂಕು ಕಚೇರಿ, ತಾಲ್ಲೂಕು ಪಂಚಾಯಿತಿ ಕಾರ್ಯಾಲಯಗಳಲ್ಲಿ ಮತ್ತು ಸಂಬಂಧಪಟ್ಟ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಹಾಗೂ ಆಯಾ ಮತಗಟ್ಟೆಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.