ದೊಡ್ಡಬಳ್ಳಾಪುರ: ಜವಾಹರ ನವೋದಯ ವಿದ್ಯಾಲಯಗಳಿಗೆ ಆನ್‌ಲೈನ್ ಮೂಲಕ 11ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 7ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು.
ಪ್ರವೇಶ ಬಯಸುವ ವಿದ್ಯಾರ್ಥಿಗಳು 2019-20ನೇ ಸಾಲಿನ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು,ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಶಾಲೆ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದಿರಬೇಕು. ವಿದ್ಯಾರ್ಥಿಯ ಜನ್ಮ ದಿನಾಂಕ 1-6-2002 ರಿಂದ 31-5-2006 ಅವಧಿಯ ಒಳಗೆ ಇರಬೇಕು ಎಂದು ಬಾಶೆಟ್ಟಿಹಳ್ಳಿಯಲ್ಲಿನ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲ ಆರ್.ಚಕ್ರವರ್ತಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಾಲತಾಣ www.navodaya.gov.in