ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 2 ರಂದು) 84 ಪುರುಷರು ಹಾಗೂ 62 ಮಹಿಳೆಯರು ಸೇರಿದಂತೆ 146 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 18 ಪುರುಷರು ಮತ್ತು 13 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 18 ಪುರುಷರು ಮತ್ತು 8 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 14 ಪುರುಷರು ಮತ್ತು 17 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 1 ಪುರುಷನಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕುರಿತು ವರದಿಯ ಅಂಕಿಅಂಶಗಳ ಸಂಖ್ಯೆ ಗೊಂದಲದ ಕಾರಣ ದೊಡ್ಡಬಳ್ಳಾಪುರದ ಜಿಲ್ಲಾ ವರದಿ ಹರಿತಲೇಖನಿ ಪ್ರಕಟಿಸುತ್ತಿಲ್ಲ.