ಬೆಂ.ಗ್ರಾ.ಜಿಲ್ಲೆ: ನೀರು ಸಂಗ್ರಹಣಾ ಘಟಕ ನಿರ್ಮಿಸಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರು ಸಂಗ್ರಹಣಾ ಘಟಕ ಕಾರ್ಯಕ್ರಮವನ್ನು ಅನುಷ್ಠಾಗೊಳಿಸಲಾಗುತ್ತಿದ್ದು, ವೈಯಕ್ತಿಕ/ಸಮುದಾಯ ನೀರು ಸಂಗ್ರಹಣಾ ಘಟಕಗಳನ್ನು ನಿರ್ಮಿಸಿಕೊಳ್ಳುವ ಫಲಾನುಭವಿಗಳಿಗೆ ಸಹಾಯಧನ ನೀಡಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಬರಗಾಲದ ಸಮಯದಲ್ಲಿ ಹಾಗೂ ಬೇಸಿಗೆಯಲ್ಲಿ, ಆಧಾರಿತ ನೀರಾವರಿ ಅಗತ್ಯತೆಯನ್ನು ಒದಗಿಸುವುದು ಹಾಗೂ ತೋಟಗಾರಿಕೆ ಬೆಳೆಗಳು ಒಣಗುವ ಸಮಯದಲ್ಲಿ ನಿರ್ಣಾಯಕ ಹಂತದ ನೀರುಣಿಸುವಿಕೆಯಿಂದ ಬೆಳೆಯನ್ನು ರಕ್ಷಿಸುವ ಅವಶ್ಯಕತೆ ಇರುವುದರಿಂದ, ನೀರು ಸಂಗ್ರಹಣಾ ಘಟಕಗಳನ್ನು ರಚಿಸಿಕೊಂಡು, ಮಳೆಗಾಲದಲ್ಲಿ ಮಳೆನೀರು, ನಾಲೆ ನೀರು, ಹರಿಯುವ ಇತ್ಯಾದಿ ಮೂಲಗಳಿಂದ ಹರಿಯುವ ನೀರನ್ನು ಸದುಪಯೋಗ ಪಡಿಸಿಕೊಂಡು ಸಂಗ್ರಹಿಸುವುದು ಅತ್ಯವಶ್ಯಕವಾಗಿರುವುದರಿಂದ ನೆಲಮಟ್ಟಕ್ಕಿಂತ ಕೆಳಗೆ ರಚಿಸುವ ನೀರು ಸಂಗ್ರಹಣಾ ಘಟಕಗಳ ಮತ್ತು ನೆಲಮಟ್ಟಕ್ಕಿಂತ ಮೇಲೆ ರಚಿಸುವ ನೀರು ಸಂಗ್ರಹಣಾ ಘಟಕಗಳ ವಿನ್ಯಾಸಗಳಿಗನುಗುಣವಾಗಿ ಸಹಾಯಧನ ನೀಡಲಾಗುವುದು.

ನೆಲಮಟ್ಟಕ್ಕಿಂತ ಕೆಳಗಿನ ಘಟಕದಲ್ಲಿ 4000 ಕ್ಯುಬಿಕ್ ಮೀಟರ್ (ಉದಾ: ಅಳತೆ:37ಮೀ X  37ಮೀ X  3ಮೀ) ಗಾತ್ರದ ಘಟಕಕ್ಕೆ 06 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 03 ಲಕ್ಷ ಸಹಾಯಧನ, 6000 ಕ್ಯುಬಿಕ್ ಮೀಟರ್ (ಉದಾ: ಅಳತೆ:45ಮೀ X  45ಮೀ X  3ಮೀ) ಗಾತ್ರದ ಘಟಕಕ್ಕೆ 08 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 04 ಲಕ್ಷ ಸಹಾಯಧನ, 8000 ಕ್ಯುಬಿಕ್ ಮೀಟರ್ (ಉದಾ: ಅಳತೆ:52ಮೀ X  52ಮೀ X  3ಮೀ) ಗಾತ್ರದ ಘಟಕಕ್ಕೆ 10 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 05 ಲಕ್ಷ ಸಹಾಯಧನ, ನೆಲಮಟ್ಟಕ್ಕಿಂತ ಮೇಲಿನ ಘಟಕದಲ್ಲಿ (Modular Steel Tank) 100000 ಲೀ. ಸಾಮರ್ಥ್ಯ (6.4 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 6.50 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 3.25 ಲಕ್ಷ ಸಹಾಯಧನ, 200000 ಲೀ.ಸಾಮರ್ಥ್ಯ (9.0 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 10 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 05 ಲಕ್ಷ ಸಹಾಯಧನ, 500000 ಲೀ.ಸಾಮರ್ಥ್ಯ (14.63 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 15 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 7.50 ಲಕ್ಷ ಸಹಾಯಧನವನ್ನು  ನೀಡಲಾಗುವುದು.

  ಹೆಚ್ಚಿನ ಮಾಹಿತಿಗಾಗಿ, ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಗಂಗಪ್ಪ.ಎಸ್.ಹೊಂಬಾಳ ಮೊ.ಸಂ.: 9845643312, ತಾಂತ್ರಿಕ ಸಹಾಯಕ ಆದರ್ಶ.ಆರ್.ಕೆ ಮೊ.ಸಂ.: 8892367827, ಕಚೇರಿ ದೂ.ಸಂ.: 080-27681204, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಂ.ಶ್ರೀನಿವಾಸ್ ಮೊ.ಸಂ.: 9632410677, ತಾಂತ್ರಿಕ ಸಹಾಯಕ ಮಾರುತಿ ಮೊ.ಸಂ.: 9741895988, ಕಚೇರಿ ದೂ.ಸಂ.: 080-27623770, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಆರ್.ಪ್ರಶಾಂತ್ ಮೊ.ಸಂ.: 9538953949, ತಾಂತ್ರಿಕ ಸಹಾಯಕ ಸೋಮಶೇಖರ್ ಮೊ.ಸಂ.: 8453966868, ಕಚೇರಿ ದೂ.ಸಂ.: 080-29716626, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಸುಬ್ರಮಣ್ಯ.ಜೆ.ವಿ. ಮೊ.ಸಂ.: 9901754339, ತಾಂತ್ರಿಕ ಸಹಾಯಕ ವಿಜಯಕುಮಾರ್ ಮೊ.ಸಂ.: 9902581832 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು(ಜಿಪಂ) ಮಾಹಾಂತೇಶ ಮುರಗೋಡ(ಮೊ.ಸಂ.: 9448999214) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ದ್ವೇಷ ಭಾಷಣ ಮಸೂದೆ; ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ.?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ದ್ವೇಷ ಭಾಷಣ ಮಸೂದೆ; ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ

ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="117673"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!