ದೊಡ್ಡಬಳ್ಳಾಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬಡ ಕುಟುಂಬದ ದೃಷ್ಠಿಹೀನ ಮಹಿಳೆಯರಿಗೆ ನೀಡಲಾಗುವ ಹೆರಿಗೆಯ ನಂತರ 2 ವರ್ಷಗಳವರೆಗೆ ಮಾಸಿಕ ರೂ. 2,000/- “ಶಿಶುಪಾಲನಾ ಭತ್ಯೆ” ಪಡೆಯಲಿಚ್ಛಿಸುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಹೊಸಕೋಟೆ ತಾಲ್ಲೂಕು ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಂಧ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ತಮ್ಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ, ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ.
ಅರ್ಹತೆಗಳು: ವಿಕಲಚೇತನರು ಭಾರತದ ಪ್ರಜೆಯಾಗಿರಬೇಕು, ಅರ್ಜಿ ಸಲ್ಲಿಸಿದ ದಿನಾಂಕಕ್ಕೆ ಕನಿಷ್ಠ 6 ವರ್ಷಗಳು ಕರ್ನಾಟಕದಲ್ಲಿ ವಾಸವಾಗಿರಬೇಕು.(ತಹಶೀಲ್ದಾರ್ ರವರಿಂದ ಪಡೆದ ವಾಸ ದೃಢೀಕರಣ ಪತ್ರದ ಪ್ರತಿ), ಅಂಧ ಮಹಿಳೆಯರು ವಯಸ್ಸು ಕನಿಷ್ಠ 18 ವರ್ಷಕ್ಕಿಂತ ಹೆಚ್ಚಾಗಿರಬೇಕು, ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ ಕಾರ್ಡ್) ಪ್ರತಿ ಸಲ್ಲಿಸುವುದು, ಶಿಶು ಪಾಲನ ಭತ್ಯೆಯು 2 ಹೆರಿಗೆಗೆ ಮಾತ್ರ ಸೀಮಿತವಾಗಿರುತ್ತದೆ, ಕಂದಾಯ ಇಲಾಖೆಯಿಂದ ಪಡೆಯಲಾದ ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸುವುದು, (ಅವರುಗಳ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷಗಳ ಒಳಗಿರಬೇಕು), ಸಹಾಯಕ್ಕಾಗಿ ಬರುವ ವ್ಯಕ್ತಿಯಿಂದ ಶಿಶು ಲಾಲನೆ, ಪಾಲನೆ, ಆರೋಗ್ಯ ಹಾಗೂ ಪೌಷ್ಟಿಕ ಆಹಾರ ಒದಗಿಸುವ ಕುರಿತು ಮುಚ್ಚಳಿಕೆ ಪಡೆಯತಕ್ಕದ್ದು, ಶಿಶು ಪಾಲನ ಭತ್ಯೆಯನ್ನು ಮಗುವಿನ ಆರೋಗ್ಯ, ಪೌಷ್ಟಿಕ ಆಹಾರ ಮತ್ತು ಪಾಲನೆಗೆ ಮಾತ್ರ ಉಪಯೋಗಿಸಲಾಗುವುದೆಂದು ದೃಢೀಕರಿಸತಕ್ಕದ್ದು, ಶಿಶು ಪಾಲನ ಭತ್ಯೆಯನ್ನು ಮಂಜೂರು ಮಾಡುವ ಪ್ರಾಧಿಕಾರವು ಆಯಾ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾಗಿರುತ್ತಾರೆ, ಆಧಾರ್ ಕಾರ್ಡ್ ಲಿಂಕ್ ಮಾಡಿದ ಬ್ಯಾಂಕ್ ಉಳಿತಾಯ ಖಾತೆ ಐ.ಎಫ್.ಎಸ್.ಸಿ ಕೋಡ್ ಸಹಿತ ಇರುವ ಪಾಸ್ ಪುಸ್ತಕದ ನಕಲು ಪ್ರತಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ತಮ್ಮ ಗ್ರಾಮ ಪಂಚಾಯತಿಯ ವಿ.ಆರ್.ಡಬ್ಲ್ಯೂ./ತಾಲ್ಲೂಕು ಪಂಚಾಯತಿಯ ಎಂ.ಆರ್.ಡಬ್ಲ್ಯೂ ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ, ಕೊಠಡಿ ಸಂಖ್ಯೆ: 03 ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ವಿಕಲಚೇತನರ ಸಹಾಯವಾಣಿ: 080-29787441 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.