ಏಕರೂಪದ ನೇಮಕಾತಿ ಪರೀಕ್ಷಾ ನೀತಿ ಖಂಡನೀಯ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ವಿವಿಧ ಹುದ್ದೆಗಳ ನಾಮಕಾತಿಗೆ ಏಕ ರೂಪದ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಕೇಂದ್ರ ಹಣ ಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಹೇಳಿಕೆಯನ್ನು ಖಂಡಿಸಿ ಗುರುವಾರ ಜಯ ಕರ್ನಾಟಕ ಸಂಘಟನೆ ವತಿಯಿಂದ ತಾಲ್ಲೂಕು ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಮುನೇಗೌಡ, ಪ್ರಾದೇಶಿಕವಾದ ಭಾಷೆಗಳಲ್ಲಿ ಓದಿರುವವರು ಹಿಂದಿ ಭಾಷೆಯಲ್ಲಿ ಪರೀಕ್ಷೆಗಳನ್ನು ಬರೆಯುವುದು ಕಷ್ಟವಾಗಲಿದೆ. ಭಾಷಾ ತೊಡಕಿನಿಂದಾಗಿ ಬಹುತೇಕ ಜನ ಉತ್ತರ ಭಾರತದವರೇ ಹೆಚ್ಚಾಗಿ ಉದ್ಯೋಗ ಪಡೆಯಲು ಅವಕಾಶವಾಗಲಿದೆ. ಇದರಿಂದಾಗಿ ಪ್ರಾದೇಶಿಕ ಭಾಷೆಯಲ್ಲಿ ಕಲಿತವರು ಉದ್ಯೋಗದಿಂದ ವಂಚಿತರಾಗಲಿದ್ದಾರೆ. ಹೊರ ರಾಜ್ಯಗಳಿಂದ ಬರುವವರು ಸ್ಥಳೀಯ ಜನರೊಂದಿಗೆ ವ್ಯವಹರಿಸಲು ಹಾಗೂ ಇಲ್ಲಿನ ಜನ ಜೀವನದ ಪರಿಚಿಯ ಇಲ್ಲದೆ ಆಡಳಿತ ವ್ಯವಸ್ಥೆಯ ಕೆಟ್ಟು ಹೋಗಲಿದೆ ಎಂದರು.

ಉತ್ತರ ಕರ್ನಾಟಕದ ಜನರು ಉದ್ಯೋಗ ಇಲ್ಲದೆ ಬೇರೆಡೆಗೆ ಗುಳೆ ಹೋಗುವಂತಾಗಿದೆ. ಇಂತಹ ಸ್ಥಿತಿಯಲ್ಲಿ ಏಕರೂಪದ ಪರೀಕ್ಷಾ ನೀತಿ, ನೇಮಕಾತಿಗಳು ಪ್ರಾದೇಶಿಕ ಅಸಮಾನತೆಗೆ ದಾರಿಮಾಡಿಕೊಡಲಿದೆ. ರಾಜ್ಯದಿಂದ ಆಯ್ಕೆಯಾಗಿ ಹೋಗಿರುವ ಕೇಂದ್ರ ಹಣಕಾಸು ಸಚಿವರು ಕನ್ನಡಿಗರಗಷ್ಟೇ ಅಲ್ಲದೆ ದೇಶದ ಎಲ್ಲಾ ಪ್ರಾದೇಶಿಕ ಭಾಷಾ ಜನರಿಗೆ ಮಾಡುತ್ತಿರುವ ದ್ರೋಹವಾಗಿದೆ ಎಂದು ದೂರಿದರು.       

ಪ್ರತಿಭಟನೆಯಲ್ಲಿ ಜಯ ಕರ್ನಾಟಕ ತಾಲ್ಲೂಕು ಘಟಕದ ಕಾರ್ಯಾಧ್ಯಕ್ಷ ಎಚ್.ಎಂ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಈ.ಕೆಂಪರಾಜ್,  ಜಿಲ್ಲಾ ಕಾರ್ಯಾಧ್ಯಕ್ಷೆ ನಾಗರತ್ನಮ್ಮ, ತಾಲ್ಲೂಕು ಉಪಾಧ್ಯಕ್ಷ ಎಸ್.ಎಚ್.ರಾಮ್‌ಕುಮಾರ್, ಪಿ.ರಾಮಮೂರ್ತಿ,  ಖಜಾಂಚಿ ಶಿವಕುಮಾರ್, ಸದಸ್ಯರಾದ ಮಂಜುನಾಥ,ಆನಂದ್, ಮುನಿಕೃಷ್ಣಪ್ಪ, ಶಾಮಣ್ಣ, ದೇವರಾಜು, ಪಿ.ಶೋಭಾ, ಪ್ರಮೀಳ, ಪದ್ಮ ಇದ್ದರು.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!