ಬೆಂ.ಗ್ರಾ.ಜಿಲ್ಲೆ: ಯಂತ್ರಚಾಲಿತ ದ್ವಿಚಕ್ರವಾಹನಕ್ಕಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ತೀವ್ರತರವಾದ ದೈಹಿಕ ವಿಕಲಚೇತನರು ಉದ್ಯೋಗ ಕೈಗೊಳ್ಳಲು ಅಥವಾ ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಪಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ತಾಲ್ಲೂಕು ವ್ಯಾಪ್ತಿಯ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಯನ್ನು ತಮ್ಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ, ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಪಡೆದು ಸಲ್ಲಿಸಬಹುದು.

ಅರ್ಹತೆಗಳು: ವಿಕಲಚೇತನ ವ್ಯಕ್ತಿಗಳು ಭಾರತದ ಪ್ರಜೆಯಾಗಿದ್ದು ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳು ವಾಸವಾಗಿರಬೇಕು. 20 ರಿಂದ 60 ರ ವಯೋಮಾನ ತೀರ್ವತರನಾದ ದೈಹಿಕ ವಿಕಲಚೇತನರಿಗೆ ಮಾತ್ರ ಜೀವಿತ ಕಾಲದಲ್ಲಿ 1 ಬಾರಿ ಮಾತ್ರ ಸೌಲಭ್ಯ ಕಲ್ಪಿಸಲಾಗಿದೆ, ಈ ಯೋಜನೆ ಸೌಲಭ್ಯ ಪಡೆಯಲು ಕುಟುಂಬ ವಾರ್ಷಿಕ ಆದಾಯ ರೂ.2.00 ಲಕ್ಷಗಳಿಂತ ಕಡಿಮೆ ಇರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿ ಲಗತ್ತಿಸುವುದು, ವೈದ್ಯಕೀಯ ಪ್ರಾಧಿಕಾರದಿಂದ ನೀಡಿರುವ ಇಲಾಖೆಯ ಗುರುತಿನ ಚೀಟಿ ಹಾಗೂ ವಿಕಲಚೇತನರ ವಿಶಿಷ್ಟಗುರುತಿನ ಚೀಟಿ (ಯು.ಡಿ.ಐ.ಡಿ) ಕಾರ್ಡ್ ಪ್ರತಿ ಲಗತ್ತಿಸುವುದು, ಇತರ ಇಲಾಖೆಗಳು ಅಥವಾ ಸಂಘ ಸಂಸ್ಥೆಗಳಿಂದ ಯಂತ್ರಚಾಲಿತ ದ್ವಿಚಕ್ರವಾಹನ ಪಡೆದಿದ್ದಲ್ಲ್ಲಿ ಅಂತಹವರು   ಅರ್ಹರಾಗಿರುವುದಿಲ್ಲ, ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಅಪಘಾತ ಅಥವಾ ಅನಾರೋಗ್ಯ ಅಥವಾ ಹುಟ್ಟಿನಿಂದ ಒಂದು ಅಥವಾ ಎರಡು ಕಾಲುಗಳನ್ನು ಕಳೆದುಕೊಂಡ ಅಥವಾ ಸ್ವಾದೀನ ಇಲ್ಲದಿರುವ ಹಾಗೂ ಅಂಗವೈಕಲ್ಯತೆಯ ಪ್ರಮಾಣ ಶೇ.75ಕ್ಕಿಂತ ಹೆಚ್ಚು ಇದ್ದು, ಎರಡು ಕೈಗಳು ಸ್ವಾಧೀನವಾಗಿರುವ ಮತ್ತು ಇತರೆ ಎಲ್ಲಾ ರೀತಿಯಲ್ಲಿ ದೈಹಿಕವಾಗಿ ಸದೃಢವಾಗಿರುವ ವಿಕಲಚೇತನರಿಗೆ ಈ ಸೌಲಭ್ಯ ನೀಡಬಹುದು, ಈ ಸೌಲಭ್ಯ ಪಡೆಯಲಿಚ್ಛಿಸುವ ವಿಕಲಚೇತನರು ಸಾರಿಗೆ ಇಲಾಖೆಯಿಂದ ದ್ವಿಚಕ್ರ ವಾಹನ ಚಾಲನೆ ಮಾಡುವ ಪರವಾನಗಿ ಪತ್ರ ಪಡೆದಿರಬೇಕು, ಯಾವುದೇ ಸಂಘ ಸಂಸ್ಥೆಗಳಿಂದ, ಯಾವುದೇ ಇಲಾಖೆಗಳಿಂದ  ಹಾಗೂ ಶಾಸಕರ ಅನುದಾನದಲ್ಲಿ ದ್ವಿಚಕ್ರ ವಾಹನ ಪಡೆದಿಲ್ಲ ಎಂದು ಕರಾರು ಪಡೆದುಕೊಳ್ಳುವುದು.

ಹೆಚ್ಚಿನ ಮಾಹಿತಿಗಾಗಿ ತಮ್ಮ ಗ್ರಾಮ ಪಂಚಾಯತಿಯ ವಿ.ಆರ್.ಡಬ್ಲ್ಯೂ./ತಾಲ್ಲೂಕು ಪಂಚಾಯತಿಯ ಎಂ.ಆರ್.ಡಬ್ಲ್ಯೂ ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ, ಕೊಠಡಿ ಸಂಖ್ಯೆ: 03 ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ವಿಕಲಚೇತನರ ವಿಕಲಚೇತನರ ಸಹಾಯವಾಣಿ: 080-29787441 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!