ಗ್ರಾಮಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆ ಶೀಘ್ರ / ರಾಜ್ಯ ಚುನಾವಣಾ ಆಯೋಗದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ ಕುರಿತು,ರಾಜ್ಯ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಿದ್ದು ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ.

ಕೋವಿಡ್ -19 ಸೋಂಕಿತರಿಗೂ ಸ್ಪರ್ಧೆಗೆ ಅವಕಾಶ, ಪ್ರಚಾರದ ವೇಳೆ ಅಭ್ಯರ್ಥಿ ಜತೆ 5 ಮಂದಿಗೆ ಮಾತ್ರ, ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ, ಗೆದ್ದ ಮೇಲೆ ವಿಜಯೋತ್ಸವ ಆಚರಣೆ ಇಲ್ಲ -ಇವು ಗ್ರಾಮ ಪಂಚಾಯತ್‌ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ರಾಜ್ಯ ಚುನಾವಣ ಆಯೋಗ ಬಿಡುಗಡೆ ಮಾಡಿರುವ ಪ್ರಮಾಣಿತ ಕಾರ್ಯನಿರ್ವಹಣ ವಿಧಾನ (ಎಸ್‌ಒಪಿ)ಯ ಕರಡು ಮಾರ್ಗಸೂಚಿಗಳಾಗಿದೆ‌.

ಮಾರ್ಗ ಸೂಚಿ ಅನ್ವಯ ಚುನಾವಣಾ ಕರ್ತವ್ಯದಲ್ಲಿರುವ ಪ್ರತಿಯೊಬ್ಬ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಚುನಾವಣೆ ಕೊಠಡಿ ಪ್ರವೇಶಿಸುವ ಮುನ್ನ ಸ್ಯಾನಿಟೈಸ್ ಮಾಡಿಕೊಳ್ಳಬೇಕು. ಜೊತೆಗೆ ದೈಹಿಕ ಉಷ್ಣಾಂಶ ಪರೀಕ್ಷೆ ಮಾಡಿಸಿಕೊಳ್ಳುವ‌ ಜೊತೆಗೆ ಸಾಧ್ಯವಾದಷ್ಟು ವಿಶಾಲವಾದ ಕೊಠಡಿಯಲ್ಲಿ ಚುನಾವಣಾ ಕೆಲಸ ನಡೆಯಬೇಕು ಎಂದು ಹೇಳಿದೆ.

ಚುನಾವಣೆಗೆ ಸಂಬಂಧಿಸಿದ ಕಡತಗಳು ದಸ್ತಾವೇಜುಗಳು ಸಂಪೂರ್ಣವಾಗಿ ಸೋಂಕು ನಿವಾರಕ ಕೊಠಡಿಯಲ್ಲಿ ಬಿಡಬೇಕು ಜೊತೆಗೆ ಅದರ ಕರ್ತವ್ಯಕ್ಕೆ ಸಿಬ್ಬಂದಿಯನ್ನು ನಿಯೋಜಿಸಬೇಕು ಅವರ ಮಾತ್ರ ಒಳಗೆ ಹೋಗಲು ಅವಕಾಶ ಕಲ್ಪಿಸಿ ಹೊಸ‌‌ಕರಡು ಮಾರ್ಗಸೂಚಿಯಲ್ಲಿ ಪ್ರಕಟಿಸಲಾಗಿದೆ.

ಚುನಾವಣಾಧಿಕಾರಿಗಳು ನಾಮಪತ್ರ ಸ್ವೀಕರಿಸುವ ವೇಳೆ ಫೇಸ್ ಮಾಸ್ಕ್ ಧರಿಸಬೇಕು. ಕೈಗಳಿಗೆ ಗ್ಲೌಸ್ ಕಡ್ಡಾಯವಾಗಿ ಧರಿಸಬೇಕು.ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿ ಮತ್ತು ಒಬ್ಬ ಸೂಚಕನಿಗೆ ಮಾತ್ರ ಚುನಾವಣಾಧಿಕಾರಿ ಕೊಠಡಿ ಪ್ರವೇಶಿಸಲು ಅವಕಾಶವಿರುತ್ತದೆ. ಕೊರೋನಾ ಪಾಸಿಟಿವ್ ವ್ಯಕ್ತಿ ನಾಮಪತ್ರ ಸಲ್ಲಿಸಲು ಇಚ್ಛಿಸಿದರೇ ಸೂಚಕರ ಮೂಲಕ ನಾಮಪತ್ರ ಸಲ್ಲಿಸಬಹುದು ಎಂದು ತಿಳಿಸಿದೆ.

ನಾಮಪತ್ರ ಪರಿಶೀಲನೆ ವೇಳೆ ಕ್ಷೇತ್ರವಾರು ಹಾಜರಿರುವ ಅಭ್ಯರ್ಥಿಗಳ ಸಮ್ಮುಖದಲ್ಲಿ ಮಾಡಬೇಕು.ಚುನಾವಣಾ ಪ್ರಚಾರದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡು ಐದು ಮಂದಿಗೆ ಮಾತ್ರ ಪ್ರಚಾರ ಮಾಡಲು ಅವಕಾಶವಿರುತ್ತದೆ. ಪ್ರಚಾರದ ವೇಳೆ ಫೇಸ್ ಮಾಸ್ಕ್ ಧರಿಸಬೇಕು. ಅಭ್ಯರ್ಥಿಗಳು ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನ ಹಂಚುವಾಗ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕು ಎನ್ನುವ ನಿರ್ಬಂಧ ವಿದಿಸಲಾಗಿದೆ.

ಮತದಾನದ ದಿನ ಮತಗಟ್ಟೆ ಅಧಿಕಾರಿಗಳು ಫೇಸ್ ಮಾಸ್ಕ್ ಹ್ಯಾಂಡ್ ಗ್ಲೌಸ್ ಧರಿಸಬೇಕು. ಮತದಾರರು ಫೇಸ್ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಮತದಾನ ಮಾಡಬೇಕು. ಮತದಾನ ಕೊಠಡಿ ಪ್ರವೇಶಿಸುವ ವೇಳೆ ಕೋವಿಡ್ ಥರ್ಮಲ್ ಜ್ವರ ತಪಾಸಣೆ ಕಡ್ಡಾಯ ಮಾಡಬೇಕು ಎಂದು ರಾಜ್ಯ ಚುನಾವಣಾ ಆಯೋಗ ತನ್ನ ‌ ಹತ್ತು ಪುಟಗಳ

ಸುದೀರ್ಘ ಮಾರ್ಗಸೂಚಿಯನ್ನು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯ ಚುನಾವಣಾ ಆಯೋಗ ದಿನಾಂಕ ಪ್ರಕಟಿಸುತ್ತಿದ್ದಂತೆ ತಾವು ಚುನಾವಣೆಯನ್ನು ನಡೆಸಲು ಸಿದ್ಧವಿರುವುದಾಗಿ ಈಗಾಗಲೇ ಸರ್ಕಾರ ಪ್ರಕಟಿಸಿದ ಗ್ರಾಮಪಂಚಾಯತಿಗಳ ಚುನಾವಣೆ ನಡೆಯುವ ಸಾಧ್ಯತೆಗಳು ಇವೆ.

ಕೇಂದ್ರ ಗೃಹ ಸಚಿವಾಲಯ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೋವಿಡ್ ನಿಯಂತ್ರಣಕ್ಕೆ ಕಾಲಕಾಲಕ್ಕೆ ಮಾರ್ಗಸೂಚಿಗಳನ್ನು ಹೊರಡಿಸುತ್ತದೆ. ಅದರಂತೆ ಗ್ರಾ.ಪಂ. ಸಾರ್ವತ್ರಿಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಂತ್ರಿಕ ತಜ್ಞರೊಂದಿಗೆ ಆ.18ರಂದು ಚರ್ಚಿಸಿದ್ದು,ಅವರ ಸಲಹೆಗಳನ್ನು ಆಧರಿಸಿ ಎಸ್‌ಒಪಿ ರಚಿಸಲಾಗಿದೆ ಎಂದು ಆಯೋಗ ತಿಳಿಸಿದೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ಸಾವಿರ ವರ್ಷಗಳ ಇತಿಹಾಸವಿರುವ ಪವಿತ್ರ ಸೋಮನಾಥ ಜ್ಯೋತಿರ್ಲಿಂಗ (Somnath Jyotirlinga Darshan) ಮಾರ್ಚ್ 14ರಂದು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ಈ ಜ್ಯೋತಿರ್ಲಿಂಗ ದರ್ಶನಕ್ಕೆ ನಗರದ ಸೋಮೇಶ್ವರ ದೇವಾಲಯದಲ್ಲಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್ಟ್ ಆಫ್

[ccc_my_favorite_select_button post_id="120187"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!