ದೊಡ್ಡಬಳ್ಳಾಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಕಾನೂನು ಪದವೀಧರರಿಂದ ನ್ಯಾಯಾಂಗ ಆಡಳಿತದಲ್ಲಿ 4 ವರ್ಷಗಳ ಅವಧಿಗೆ, ತರಬೇತಿಗೆ ಹಿಂದುಳಿದ ವರ್ಗಗಳಿಗೆ ಸೇರಿದ (ಪ್ರ.ವರ್ಗ-1, 2ಎ, 3ಎ ಮತ್ತು 3ಬಿ) ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು, ಅರ್ಜಿ ನಮೂನೆಯನ್ನು ಕಚೇರಿಯಲ್ಲಿ ಪಡೆದು, ಭರ್ತಿ ಮಾಡಲಾದ ಅರ್ಜಿಗಳನ್ನು ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಅಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ: 215, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಇಲ್ಲಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಲು 2020ರ ಅಕ್ಟೋಬರ್ 03 ಕೊನೆಯ ದಿನವಾಗಿದೆ.
ನಿಬಂಧನೆಗಳು: ಅಭ್ಯರ್ಥಿಯು ಕಾನೂನು ಪದವೀಧರರಾಗಿದ್ದು, ಈ ತರಬೇತಿಗೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿಯನ್ನು ಮುಗಿಸಿ 2 (ಎರಡು) ವರ್ಷಗಳು ಮೀರಿರಬಾರದು. ಅಭ್ಯರ್ಥಿಗಳು ಹಿಂದುಳಿದ ಪ್ರ.ವರ್ಗ-1., 2ಎ., 3ಎ ಮತ್ತು 3ಬಿ ವರ್ಗೀಕರಣಕ್ಕೆ ಒಳಪಟ್ಟಿರಬೇಕು ಹಾಗೂ ಮೇಲ್ಕಂಡ ವರ್ಗಗಳಿಗೆ ನಿಗಧಿಪಡಿಸಲಾದ ಜಾತಿ ಆದಾಯ ಪ್ರಮಾಣ ಪತ್ರಗಳೊಂದಿಗೆ ವಿವರಗಳನ್ನು ಭರ್ತಿ ಮಾಡಲಾದ ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು.
ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ಆದಾಯ ಮಿತಿ ಪ್ರವರ್ಗ 1ರ ಅಭ್ಯರ್ಥಿಗಳಿಗೆ ರೂ. 3.50 ಲಕ್ಷ ಹಾಗೂ ಪ್ರವರ್ಗ 2 (ಎ), 3 (ಎ) ಅಥವಾ 3 (ಬಿ) ಅಭ್ಯರ್ಥಿಗಳಿಗೆ ರೂ. 2.50 ಲಕ್ಷಗಳು.
ಭರ್ತಿ ಮಾಡಲಾದ ಅರ್ಜಿಗಳನ್ನು ಸಲ್ಲಿಸಲು ನಿಗಧಿಪಡಿಸಲಾದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳ ವಯಸ್ಸು 30 ವರ್ಷಗಳನ್ನು ಮೀರಿರಬಾರದು, ಆಯ್ಕೆಯಾದ ಅಭ್ಯರ್ಥಿಗಳಿಗೆ 4 ವರ್ಷಗಳ ತರಬೇತಿ ಅವಧಿ ಇದ್ದು, ಈ ಅವಧಿಯೊಳಗೆ ತರಬೇತಿಯನ್ನು ಬಿಡಲು ಅವಕಾಶವಿರುವುದಿಲ್ಲ ಹಾಗೂ ಅಭ್ಯರ್ಥಿಯು ಸುಳ್ಳು ಮಾಹಿತಿ ನೀಡಿದಲ್ಲಿ ಅಥವಾ ತರಬೇತಿ ಅವಧಿಯ ಮಧ್ಯದಲ್ಲಿ ತರಬೇತಿಯಿಂದ ಬಿಟ್ಟು ಹೋದಲ್ಲಿ ಸರ್ಕಾರ ಅವರಿಗಾಗಿ ಖರ್ಚು ಮಾಡಿದ ಹಣವನ್ನು ವರ್ಷಕ್ಕೆ ಶೇ.10ರ ಬಡ್ಡಿಯೊಂದಿಗೆ ಭೂ ಕಂದಾಯದ ಬಾಕಿ ಎಂದು ಪರಿಗಣಿಸಿ ವಸೂಲು ಮಾಡಲಾಗುವುದು. ಆದರೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಅನ್ವಯಿಸುವುದಿಲ್ಲ.
ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ ರೂ.4,000/- ಗಳ ತರಬೇತಿ ಭತ್ಯೆಯನ್ನು ದಿನಚರಿ ಆಧಾರದ ಮೇರೆಗೆ ನೀಡಲಾಗುವುದು. ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ಸರ್ಕಾರಿ ವಕೀಲರು ಅಥವಾ 20 ವರ್ಷಗಳಿಗಿಂತ ಹೆಚ್ಚಿನ ವರ್ಷಗಳು ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ವಕೀಲರಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನು ತರಬೇತಿ ಪಡೆಯುವ ಸಲುವಾಗಿ ತರಬೇತಿಗೆ ನಿಯೋಜಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಯು ಈ ಇಲಾಖೆಯ ನಿಬಂಧನೆಗಳು ಹಾಗೂ ಕಾಲಕಾಲಕ್ಕೆ ಹೊಂದಿರುವ ಸರ್ಕಾರದ ಆದೇಶಗಳಿಗೆ ಬದ್ಧನಾಗಿರುತ್ತೇನೆಂದು ಮುಚ್ಚಳಿಕೆಯನ್ನು ಬರೆದು ಕೊಡಬೇಕು. ಅರ್ಹ ಅಭ್ಯರ್ಥಿಗಳಿಗೆ ಆಯ್ಕೆ ಸಮಿತಿಯ ಸಂದರ್ಶನದ ದಿನಾಂಕ ಹಾಗೂ ಸ್ಥಳವನ್ನು ತಿಳಿಸಿದಾಗ ಸಂದರ್ಶನಕ್ಕೆ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗುವುದು.
ಅಭ್ಯರ್ಥಿಗಳು ಭರ್ತಿ ಮಾಡಲಾದ ಅರ್ಜಿಯೊಂದಿಗೆ ಅವಶ್ಯಕ ಮಾಹಿತಿಗಳಾದ ಕಾನೂನು ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಗಳ ದೃಢೀಕರಣ ಪ್ರತಿ ಹಾಗೂ ಜನ್ಮ ದಿನಾಂಕದ ಆಧಾರಕ್ಕಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಟಿ.ಸಿ ದೃಢೀಕೃತ ಪ್ರತಿಯನ್ನು ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.215, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಅಥವಾ ದೂ.ಸಂ.: 080-29787440 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿ ಭವ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.