ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ಲಾಕ್‌ಡೌನ್‌ನಿಂದಾಗಿ ಆರ್‌ಬಿಐ ಸಾಲಗಾರರಿಗೆ ನೀಡಿರುವ ವಿನಾಯಿತಿ ಹಾಗೂ ನಿರ್ದೇಶನವನ್ನು ಉಲ್ಲಂಘಿಸಿ  ಮೈಕ್ರೋ ಫೈನಾನ್ಸ್‌ಗಳು ಸಾಲಗಾರರಿಗೆ ಒತ್ತಡ ಹಾಗೂ ಎಚ್ಚರಿಕೆ ನೀಡುವ ದೂರುಗಳು ಬಂದರೆ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು. 

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು “ಕೋವಿಡ್ ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ಹಕ್ಕೊತ್ತಾಯ ಕುರಿತ ಸಭೆ”ಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಅವರು ಮಾತನಾಡಿದರು. 

ನೇಯ್ಗೆ ಉದ್ಯಮದಲ್ಲಿ ತೊಡಗಿರುವ ಎಲ್ಲಾ ಕಾರ್ಮಿಕರಿಗೂ ಗುರುತಿನ ಚೀಟಿ ನೀಡಲು ಹಾಗೂ ಅಸಂಘಟಿತ ಕಾರ್ಮಿಕ ವಲಯ ಎಂದು ಗುರುತಿಸಲು ಈಗಾಗಲೇ ಸರ್ಕಾರಕ್ಕೆ ಜವಳಿ ಮತ್ತು ಕೈಮಗ್ಗ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ರಾಜ್ಯ ಸರ್ಕಾರ ನೇಕಾರರಿಗೆ ಘೋಷಣೆ ಮಾಡಿರುವ 2000 ಸಾವಿರ ರೂಪಾಯಿಗಳನ್ನು  ಪಡೆಯಲು ಮಾಲೀಕರು ತಮ್ಮ ಬಳಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸಹಕರಿಸಿ ಅವರಿಗೆ ಅನುಕೂಲವಾಗುವಂತೆ    ನಡೆದುಕೊಳ್ಳಲು ಸೂಚಿಸಿದರು ಹಾಗೂ ಈಗಾಗಲೇ ಸಲ್ಲಿಸಿರುವ ಅರ್ಜಿಗಳಲ್ಲಿ ಕೆಲವರಿಗೆ ಹಣ ಮಂಜೂರಾಗಿದ್ದು, ಬಾಕಿ ಉಳಿದಿರುವ ಅರ್ಜಿಗಳನ್ನು  ಮಂಜೂರು ಮಾಡುವಂತೆ ಕ್ರವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. 

ನೇಯ್ಗೆ ಉದ್ಯಮ ಚೇತರಿಸಿಕೊಳ್ಳುವ ಸಲುವಾಗಿ ಬೆಸ್ಕಾಂ ಅಧಿಕಾರಿಗಳು  ವಿದ್ಯುತ್ ಬಿಲ್ ಪಾವತಿಯನ್ನು  ಹಂತ ಹಂತವಾಗಿ ಪಾವತಿಸಲು ಅನುವು ಮಾಡಿಕೊಡಬೇಕು.  ಯಾವುದೇ ಸೂಚನೆಯಿಲ್ಲದೆ ವಿದ್ಯುತ್ ಸಂಪರ್ಕ ಕಡಿತ ಮಾಡಬಾರದು. ಕೆಲವು ದಿನಗಳ   ವಿನಾಯಿತಿ ನೀಡಿ ಅನಂತರ ಕ್ರಮವಹಿಸಲು ಸೂಚಿಸಿದರು. 

  ಅಂಗನವಾಡಿ ಕಾರ್ಯಕರ್ತರ ಮನವಿಯನ್ನು ಸ್ವೀಕರಿಸಿ,  ಸರ್ಕಾರದ ಆದೇಶದ ಮೇರೆಗೆ ವರ್ಗಾವಣೆಯಾದ ಅಂಗನವಾಡಿ ಕಾರ್ಯಕತೆಯರು ಹಾಗೂ ಸಹಾಯಕರನ್ನು ವರ್ಗಾವಣೆಯಾದ ಊರಿನ ಜನರು ಕಾರ್ಯನಿರ್ವಹಿಸಲು ಅಡಚಣೆ ಉಂಟು ಮಾಡಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು,   ಅಂತವರ ವಿರುದ್ಧ ಸೂಕ್ತ ಕಠಿಣ ಕ್ರಮ ಕೈಗೊಂಡು ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎನ್‌ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ: ಜಗದೀಶ್.ಕೆ.ನಾಯಕ್, ಉಪವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರ್‌ಗಳು ಹಾಗೂ ಇತರರು ಉಪಸ್ಥಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ JDS ಅಧ್ಯಕ್ಷರಾಗಿ ಹರೀಶ್ ಗೌಡ ನೇಮಕ

ದೊಡ್ಡಬಳ್ಳಾಪುರ JDS ಅಧ್ಯಕ್ಷರಾಗಿ ಹರೀಶ್ ಗೌಡ ನೇಮಕ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜಾತ್ಯಾತೀತ ಜನತಾದಳ (JDS) ಪಕ್ಷದ ಅಧ್ಯಕ್ಷರಾಗಿ ಹರೀಶ್ ಗೌಡ (Harish Gowda) ಅವರನ್ನು ನೇಮಕ ಮಾಡಲಾಗಿದೆ.

[ccc_my_favorite_select_button post_id="121336"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]