ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ಲಾಕ್‌ಡೌನ್‌ನಿಂದಾಗಿ ಆರ್‌ಬಿಐ ಸಾಲಗಾರರಿಗೆ ನೀಡಿರುವ ವಿನಾಯಿತಿ ಹಾಗೂ ನಿರ್ದೇಶನವನ್ನು ಉಲ್ಲಂಘಿಸಿ  ಮೈಕ್ರೋ ಫೈನಾನ್ಸ್‌ಗಳು ಸಾಲಗಾರರಿಗೆ ಒತ್ತಡ ಹಾಗೂ ಎಚ್ಚರಿಕೆ ನೀಡುವ ದೂರುಗಳು ಬಂದರೆ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು. 

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು “ಕೋವಿಡ್ ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ಹಕ್ಕೊತ್ತಾಯ ಕುರಿತ ಸಭೆ”ಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಅವರು ಮಾತನಾಡಿದರು. 

ನೇಯ್ಗೆ ಉದ್ಯಮದಲ್ಲಿ ತೊಡಗಿರುವ ಎಲ್ಲಾ ಕಾರ್ಮಿಕರಿಗೂ ಗುರುತಿನ ಚೀಟಿ ನೀಡಲು ಹಾಗೂ ಅಸಂಘಟಿತ ಕಾರ್ಮಿಕ ವಲಯ ಎಂದು ಗುರುತಿಸಲು ಈಗಾಗಲೇ ಸರ್ಕಾರಕ್ಕೆ ಜವಳಿ ಮತ್ತು ಕೈಮಗ್ಗ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ರಾಜ್ಯ ಸರ್ಕಾರ ನೇಕಾರರಿಗೆ ಘೋಷಣೆ ಮಾಡಿರುವ 2000 ಸಾವಿರ ರೂಪಾಯಿಗಳನ್ನು  ಪಡೆಯಲು ಮಾಲೀಕರು ತಮ್ಮ ಬಳಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸಹಕರಿಸಿ ಅವರಿಗೆ ಅನುಕೂಲವಾಗುವಂತೆ    ನಡೆದುಕೊಳ್ಳಲು ಸೂಚಿಸಿದರು ಹಾಗೂ ಈಗಾಗಲೇ ಸಲ್ಲಿಸಿರುವ ಅರ್ಜಿಗಳಲ್ಲಿ ಕೆಲವರಿಗೆ ಹಣ ಮಂಜೂರಾಗಿದ್ದು, ಬಾಕಿ ಉಳಿದಿರುವ ಅರ್ಜಿಗಳನ್ನು  ಮಂಜೂರು ಮಾಡುವಂತೆ ಕ್ರವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. 

ನೇಯ್ಗೆ ಉದ್ಯಮ ಚೇತರಿಸಿಕೊಳ್ಳುವ ಸಲುವಾಗಿ ಬೆಸ್ಕಾಂ ಅಧಿಕಾರಿಗಳು  ವಿದ್ಯುತ್ ಬಿಲ್ ಪಾವತಿಯನ್ನು  ಹಂತ ಹಂತವಾಗಿ ಪಾವತಿಸಲು ಅನುವು ಮಾಡಿಕೊಡಬೇಕು.  ಯಾವುದೇ ಸೂಚನೆಯಿಲ್ಲದೆ ವಿದ್ಯುತ್ ಸಂಪರ್ಕ ಕಡಿತ ಮಾಡಬಾರದು. ಕೆಲವು ದಿನಗಳ   ವಿನಾಯಿತಿ ನೀಡಿ ಅನಂತರ ಕ್ರಮವಹಿಸಲು ಸೂಚಿಸಿದರು. 

  ಅಂಗನವಾಡಿ ಕಾರ್ಯಕರ್ತರ ಮನವಿಯನ್ನು ಸ್ವೀಕರಿಸಿ,  ಸರ್ಕಾರದ ಆದೇಶದ ಮೇರೆಗೆ ವರ್ಗಾವಣೆಯಾದ ಅಂಗನವಾಡಿ ಕಾರ್ಯಕತೆಯರು ಹಾಗೂ ಸಹಾಯಕರನ್ನು ವರ್ಗಾವಣೆಯಾದ ಊರಿನ ಜನರು ಕಾರ್ಯನಿರ್ವಹಿಸಲು ಅಡಚಣೆ ಉಂಟು ಮಾಡಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು,   ಅಂತವರ ವಿರುದ್ಧ ಸೂಕ್ತ ಕಠಿಣ ಕ್ರಮ ಕೈಗೊಂಡು ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎನ್‌ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ: ಜಗದೀಶ್.ಕೆ.ನಾಯಕ್, ಉಪವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರ್‌ಗಳು ಹಾಗೂ ಇತರರು ಉಪಸ್ಥಿತರಿದ್ದರು.

ರಾಜಕೀಯ

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಹೆಚ್.ಡಿ. ಕುಮಾರಸ್ವಾಮಿ ಗಂಭೀರ

ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ (Vote Chori) ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ನೇರ ಆರೋಪ ಮಾಡಿದರು.

[ccc_my_favorite_select_button post_id="115932"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ: 300ಕ್ಕೂ ಹೆಚ್ಚು ಆಟಗಾರರ ಭಾಗಿ

ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ: 300ಕ್ಕೂ ಹೆಚ್ಚು ಆಟಗಾರರ ಭಾಗಿ

ರಾಜ್ಯಮಟ್ಟದ ಟೆನ್ನಿಸ್ (tennis) ಪಂದ್ಯಾವಳಿಗೆ ಈ ಬಾರಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ ಪಂದ್ಯಾವಳಿನಲ್ಲಿ 300ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದು, ಇದು ರಾಜ್ಯದಲ್ಲಿ ಟೆನ್ನಿಸ್ ಕ್ರೀಡೆಯ ಜನಪ್ರಿಯತೆಯನ್ನು ಎತ್ತಿ ಹಿಡಿದಿದೆ ಎಂದು ಅವರು ತಿಳಿಸಿದರು.

[ccc_my_favorite_select_button post_id="115872"]
ಕೆರೆಯಲ್ಲಿ ಮೀನು ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು..!

ಕೆರೆಯಲ್ಲಿ ಮೀನು ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು..!

ಕೆರೆಯಲ್ಲಿ (Lake) ಮೀನು ಹಿಡಿಯುವ ವೇಳೆ (Fishing) ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನಪ್ಪಿರುವ ಘಟನೆ ನಡೆದಿದೆ..

[ccc_my_favorite_select_button post_id="115898"]
ಭೀಕರ ಅಪಘಾತ.. 10 ತಿಂಗಳ ಮಗು ಸೇರಿ 20 ಮಂದಿ ದುರ್ಮರಣ.!| Video

ಭೀಕರ ಅಪಘಾತ.. 10 ತಿಂಗಳ ಮಗು ಸೇರಿ 20 ಮಂದಿ ದುರ್ಮರಣ.!| Video

ಇಂದು (ಸೋಮವಾರ) ಬೆಳ್ಳಗೆ ಟಿಪ್ಪರ್ ಲಾರಿ ಮತ್ತು ಸರ್ಕಾರಿ ಸಾರಿಗೆ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) 20 ಮಂದಿ ಮೃತಪಟ್ಟಿರುವ ಘಟನೆ ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ ನಡೆದಿದೆ.

[ccc_my_favorite_select_button post_id="115661"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!