ಕಲಾವಿದ ಕೆ.ಸಿ.ನಾರಾಯಣ ಅವರಿಗೆ ಯಕ್ಷಗಾನ ಅಕಾಡೆಮಿಯ ಗೌರವ ಪ್ರಶಸ್ತಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಹಿರಿಯ ಯಕ್ಷಗಾನ ಕಲಾವಿದ  ಕೆ.ಸಿ.ನಾರಾಯಣ ಅವರು ಕರ್ನಾಟಕ ಯಕ್ಷಗಾನ ಅಕಾಡೆಮಿಯ 2019 ನೇ ಸಾಲಿನ   ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

68ರ ಹರೆಯದ ಕೆ.ಸಿ.ನಾರಾಯಣ ಅವರು ಮೂಡಲಪಾಯ ಯಕ್ಷಗಾನದಲ್ಲಿ ಸಿದ್ಧಹಸ್ತರು. ಬಾಲ್ಯದಿಂದಲೇ ಯಕ್ಷಗಾನ ಕಲೆಯನ್ನು ಮೈಗೂಡಿಸಿಕೊಂಡಿರುವ ಇವರು,5 ದಶಕಗಳಿಂದ ಯಕ್ಷಗಾನ ಕಲೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಕರಿರಾಜ ಚರಿತ್ರೆ ಮೂಡಲಪಾಯ ಯಕ್ಷಗಾನದಲ್ಲಿ  ವಿವಿಧ ಪಾತ್ರಗಳನ್ನು ನಿರ್ವಹಿಸಿದ್ದರೂ ಕರಿರಾಜ ಚರಿತ್ರೆಯ ಪುಂಡರೀಕಾಕ್ಷಿ ಸ್ತ್ರೀ ಪಾತ್ರ ಇವರಿಗೆ ಹೆಚ್ಚಿನ ಜನಪ್ರಿಯತೆ ತಂದುಕೊಟ್ಟಿದೆ.

ಪ್ರಸ್ತುತ ಯದ್ಲಳ್ಳಿ ಪಾಪಣ್ಣನವರ ಭಾಗವತ ಯಕ್ಷಗಾನ ಮಂಡಲಿಯಲ್ಲಿ ಭಾಗವತರಾಗಿ, ಕಾರ್‍ಯದರ್ಶಿಗಳಾಗಿ ತೊಡಗಿಸಿಕೊಂಡಿದ್ದಾರೆ.  ಹಲವಾರು ಜನ ಶಿಷ್ಯ ವೃಂದವನ್ನು ಹೊಂದಿದ್ದಾರೆ. ಯದ್ಲಳ್ಳಿ ಪಾಪಣ್ಣನವರ ಯಕ್ಷಗಾನ ಮಂಡಲಿಯಿಂದ ರಾಜ್ಯದ ವಿವಿದೆಡೆ ನೀಡುವ ಕರಿರಾಜ ಚರಿತ್ರೆ ಯಕ್ಷಗಾನ ಪ್ರದರ್ಶನದಲ್ಲಿ ಕೆ.ಸಿ.ನಾರಾಯಣ ಅವರ ಪಾತ್ರ ಪ್ರಮುಖವಾಗಿದೆ. ಇವರಿಗೆ ತಾಲೂಕಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಸನ್ಮಾನಿಸಿ ಗೌರವಿಸಿವೆ. 

ಅಕ್ಟೋಬರ್‌ನಲ್ಲಿ ಪ್ರಶಸ್ತಿ ಪ್ರದಾನ:ಕರ್ನಾಟಕ ಯಕ್ಷಗಾನ ಅಕಾಡೆಮಿಯ 2019ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಅಕ್ಟೋಬರ್‌ನಲ್ಲಿ  ನಡೆಯಲಿದೆ.

ಪ್ರಶಸ್ತಿಗೆ ಭಾಜನರಾಗಿರುವ ಕೆ.ಸಿ.ನಾರಾಯಣ ಅವರಿಗೆ ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘ,ಯದ್ಲಳ್ಳಿ ಪಾಪಣ್ಣನವರ ಭಾಗವತ ಯಕ್ಷಗಾನ ಮಂಡಲಿ ಸೇರಿದಂತೆ ತಾಲೂಕಿನ ವಿವಿಧ ಗಣ್ಯರು ಅಭಿನಂದಿಸಿದ್ದಾರೆ.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!