ದೇಶದ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಕನ್ಯಾಕುಮಾರಿ ಶ್ರೀನಿವಾಸ್

ದೊಡ್ಡಬಳ್ಳಾಪುರ: ದೇಶದ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಎಂದು ಜಿಲ್ಲಾಪಂಚಾಯಿತಿ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ “ಡಾ: ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ” ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಮಕ್ಕಳ ಮನಸ್ಸನ್ನು ಅರಿತು, ಅವರನ್ನು ಪ್ರಗತಿಯತ್ತ ಕೊಂಡೊಯ್ಯುವ ನೇತಾರ ಶಿಕ್ಷಕರು ಮಾತ್ರ. ತಾಯಿ ಹೇಗೆ ತನ್ನ ಮಗುವಿಗೆ ಜನ್ಮ ನೀಡುತ್ತಾಳೋ ಹಾಗೆಯೇ ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ದಾರಿ ದೀಪವಾಗಿರುತ್ತಾರೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಮಾತನಾಡಿ ಅಜ್ಞಾನದಿಂದ  ಜ್ಞಾನದ ಕಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ, ಕೊಂಡೊಯ್ಯವ ಗುರುಗಳನ್ನು ಇಂದು ನೆನಯಲು ಮಹಾದಿನವಾಗಿದೆ. ಡಾ: ಸರ್ವಪಲ್ಲಿ ರಾಧಾಕೃಷ್ಣ ನ್ ರವರ ಮಹಾನ್ ಚಿಂತನೆ ಅವರ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನವಾಗಿದೆ ಎಂದು ತಿಳಿಸಿದರು.

ಒಂದು ದೇಶದ ಅಭಿವದ್ಧಿಯನ್ನು ಅಳೆಯಲು ಅಲ್ಲಿನ ಜನಸಂಖ್ಯೆ ಹಾಗೂ ಶಿಕ್ಷಣ ಹೊಂದಿರುವ  ಸಂಖ್ಯೆಗೆ ಅನುಗುಣವಾಗಿ ಅಲ್ಲಿನ ಅಭಿವೃದ್ಧಿ ಹಾಗೂ ಪ್ರಗತಿಯನ್ನು ಅಂದಾಜು ಮಾಡಲಾಗುತ್ತದೆ. ಹೀಗೆ ಶಿಕ್ಷಣ ಎಂಬುದು ಪ್ರತಿಯೊಂದು ಹಂತದಲ್ಲೂ ತುಂಬಾ ಅವಶ್ಯಕ ವಾದದ್ದು ಎಂದರು.ಜಿಲ್ಲೆಯು ಉತ್ತಮ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶದ ಜೊತೆಗೆ ಗುಣಾತ್ಮಕ ಹಾಗೂ ಪರಿಣಮಾತ್ಮಕ ಶಿಕ್ಷಣದಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಗಳಿಸಿರುವುದು ಹರ್ಷದಾಯಕ ವಾದ್ದದ್ದು. ಈ ಉತ್ತಮ ಫಲಿತಾಂಶದ ಹಿಂದೆ ಅನೇಕ ಅಧಿಕಾರಿಗಳು ಮತ್ತು ಶಿಕ್ಷಕರ ಶ್ರಮವಿದೆ ಎಂದು ಎಲ್ಲರಿಗೂ ಅಭಿನಂದನೆ ತಿಳಿಸಿದರು. 

ಯುವ ಸಮುದಾಯದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು.ವಿದ್ಯಾರ್ಥಿಗಳಲ್ಲಿ ಕೇವಲ ಅಂಕಗಳಿಸುವ ಕೌಶಲ್ಯವನ್ನು  ಮಾತ್ರವಲ್ಲದೆ ಆತ್ಮಸ್ಥೈರ್ಯ ದೊಂದಿಗೆ ಜೀವನ ನಡೆಸುವ    ಉತ್ತಮವಾದ ಸಮಾಜ ರೂಪಿಸುವಂತೆ ತಿಳಿಸಿದರು.

ಇದೇ ವೇಳೆ, ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕೆಲವು ಶಿಕ್ಷಕರಿಗೆ ಪ್ರದಾನ ಮಾಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜಯಮ್ಮ,ಜಿಲ್ಲಾ ಪಂಚಾಯತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ: ಜಗದೀಶ್.ಕೆ.ನಾಯಕ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಗಂಗಮಾರೇಗೌಡ ಸೇರಿದಂತೆ ಶಿಕ್ಷಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್ ಸಿಗ್ನಲ್

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್

ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ 'ಬಯೋ-2025' ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)

[ccc_my_favorite_select_button post_id="109689"]
ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: ಎತ್ತಿನಹೊಳೆ ನೀರು ಸಂಗ್ರಹದ ಜಲಾಶಯ ನಿರ್ಮಾಣಕ್ತೆ ಭೂಮಿ ನೀಡುವ ಲಕ್ಕೇನಹಳ್ಳಿ ಭಾಗದ ರೈತರ ಹಿತ ಕಾಪಾಡುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ದೊಡ್ದಬಳ್ಳಾಪುರ ತಾಲೂಕು ಲಕ್ಕೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ

[ccc_my_favorite_select_button post_id="109700"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]