ದೊಡ್ಡಬಳ್ಳಾಪುರ: ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಮೂವರನ್ನು ಸಬ್ ಇನ್ಸ್ಪೆಕ್ಟರ್ ಸೋಮಶೇಖರ್ ನೇತೃತ್ವದ ಪೊಲೀಸರ ತಂಡ ಬಂಧಿಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅರಳುಮಲ್ಲಿಗೆ ವೃತ್ತದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಅಂಕಿ ಸಂಖ್ಯೆಗಳ ಆಧಾರದ ಮೇರೆಗೆ ಹೇಳುತ್ತ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಸಂಜಯನಗರದ ನಾರಾಯಣಪ್ಪ (55),ನಾಗಭೂಷಣ (36) ಹಾಗೂ ವಿವೇಕಾನಂದ ನಗರದ ಗಂಗಾಧರ(36) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ರೂ10ಕ್ಕೆ ರೂ70 ನೀಡುತ್ತೇವೆ ಎಂದು ಮಟ್ಕಾದಲ್ಲಿ ತೊಡಗಿದ್ದರೆನ್ನಲಾಗಿದ್ದು,ಇವರಿಂದ ನಗದು ಹಾಗೂ ಮಟ್ಕಾ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇನ್‌ಸ್ಪೆಕ್ಟರ್ ಸೋಮಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.