ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 5 ರಂದು) 82 ಪುರುಷರು ಹಾಗೂ 42 ಮಹಿಳೆಯರು ಸೇರಿದಂತೆ 124 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ವರದಿ ತಿಳಿಸಿದೆ.
ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 19 ಪುರುಷರು ಮತ್ತು 10 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 8 ಪುರುಷರು ಮತ್ತು 8 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 23 ಪುರುಷರು ಮತ್ತು 7 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 4 ಪುರುಷರು ಹಾಗೂ 1 ಮಹಿಳೆಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನ ವರದಿ ಕುರಿತು ಗೊಂದಲ ಮುಂದುವರೆದಿರುವ ಕಾರಣ ಹರಿತಲೇಖನಿ ಜಿಲ್ಲಾ ಆರೋಗ್ಯ ಇಲಾಖೆ ನೀಡಿರುವ ವರದಿ ಪ್ರಕಟಿಸುವುದಿಲ್ಲ.