ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೋಲ್ ಬಳಿ ಇರುವ ಪೂಜೇನಹಳ್ಳಿ ತೋಟಗಾರಿಕಾ ಪ್ರದೇಶಕ್ಕೆ ಇಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಭೇಟಿ ನೀಡಿ, ನೂತನವಾಗಿ ನಿರ್ಮಿಸಲಾಗುತ್ತಿರುವ ಸಮಗ್ರ ಶೀತಲ ಸರಪಳಿ ಘಟಕದ ಕಾಮಗಾರಿಯನ್ನು ಪರಿಶೀಲಿಸಿ, ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ ಹಾಗೂ ಇತರರು ಇದ್ದರು.