ಮಾದಕ ವಸ್ತು ಪೂರೈಕೆ ಮಾಡದಂತೆ ರೆಸಾರ್ಟ್​,ರೆಸ್ಟೋರೆಂಟ್ ಮಾಲೀಕರಿಗೆ ದೊಡ್ಡಬಳ್ಳಾಪುರ ಪೊಲೀಸರ ವಾರ್ನಿಂಗ್​​​

ದೊಡ್ಡಬಳ್ಳಾಪುರ: ನಮ್ಮ ಮುಂದಿನ ಪೀಳಿಗೆ ಮಾದಕ ವಸ್ತು ರಹಿತ ಸಮಾಜ ನಿರ್ಮಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಅಪರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಗಣೇಶ್ ಹೇಳಿದರು.

ಮಾದಕ ವಸ್ತು ವಿರುದ್ದ ಸಮರ ಕುರಿತಂತೆ ನಗರದ ನಗರದ ಬಸವ ಭವನದಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಹೊಟೇಲ್, ಬಾರ್,ರೆಸಾರ್ಟ್, ರೆಸ್ಟೋರೆಂಟ್, ಲಾಡ್ಜ್ ಮಾಲೀಕರ ಸಭೆಯಲ್ಲಿ ಅವರು ಮಾತನಾಡಿದರು.

ಮಾದಕವಸ್ತು ವಿಚಾರ ರಾಜ್ಯದಲ್ಲಿ ಬಹು ಚರ್ಚಿತ ವಿಷಯವಾಗಿದ್ದು,ಜಿಲ್ಲೆಯಲ್ಲಿ ಈ ವಸ್ತುಗಳ ಮಾರಾಟಕ್ಕೆ ಅವಕಾಶವಿರದಂತೆ ಕ್ರಮಕೈಗೊಳ್ಳಲು ತಮ್ಮೆಲ್ಲರ ಸಹಕಾರ ಮುಖ್ಯ.ಮುಂದಿನ ನಮ್ಮ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಾದಕ ವಸ್ತುಗಳ ಜಾಲವನ್ನ ತೊಡೆದು ಹಾಕಲು ಪೊಲೀಸರಿಗೆ ನೆರವು ನೀಡಬೇಕೆಂದರು.

ಡಿವೈ ಎಸ್ಪಿ ಟಿ.ರಂಗಪ್ಪ ಮಾತನಾಡಿ, ಹಣದ ಆಸೆಗೆ ಅಮಾಯಕ ಯುವ ಜನರ ಮಾದಕ ವ್ಯಸನಿಗಾಳ ತಳ್ಳವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆ ಸಂಪೂರ್ಣ ಸಿದ್ದವಾಗಿದೆ,ಮಾದಕ ವಸ್ತು ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿರುವ ಎನ್‌ಡಿಪಿಎಸ್‌ ಕಾಯಿದೆಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಣೆ ಮಾಡುವವರಿಗೆ ಶಿಕ್ಷೆ ಆದರೆ, ಇತ್ತೀಚಿನ ದಿನಗಳಲ್ಲಿ ಯುವ ಜನತೆಯಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚಾಗುತ್ತಿದ್ದು, ನಿಯಂತ್ರಿಸಲು ಮಾದಕ ವಸ್ತುಗಳನ್ನು ಸೇವನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ.

ಮಾದಕ ವಸ್ತುಗಳಾದ ಗಾಂಜಾ, ಆಫೀಮ್, ಚರಸ್ ಮತ್ತಿತರ ಪ್ರಜ್ಞೆ ತಪ್ಪಿಸುವಂತಹ ಆರೋಗ್ಯಕ್ಕೆ ಮಾರಕವಾಗುವಂತಹ ಚಟುವಟಿಕೆ ಗಳು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕು ಅವಕಾಶ ನೀಡಬಾರದು,ಹಾಗೇನಾದರೂ ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಅಂತಹವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

ಸರ್ಕಲ್ ಇನ್ಸ್ಪೆಕ್ಟರ್ ರಾಘವ ಎಸ್.ಗೌಡ ಮಾತನಾಡಿ,ಬರಲಿರುವ ಹೊಸ ವರ್ಷದ ಆಚರಣೆ ಸಂಪೂರ್ಣ ನಿಷೇಧವಿರಲಿದೆ,ರೆಸಾರ್ಟ್,ರೆಸ್ಟೋರೆಂಟ್ಗಳು ಯಾವುದೇ ಬುಕಿಂಗ್ ಮತ್ತಿತರ ಚಟುವಟಿಕೆ ನಡೆಸಬಾರದು. ನಂದಿ ವ್ಯಾಪ್ತಿಯಲ್ಲಿ ರೆಸ್ಟಾರ್ಟ್ ಗಳಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪ ಪದೇ ಪದೇ ಕೇಳಿಬರುತ್ತಿದ್ದು,ಅಲ್ಲಿನ ರೆಸ್ಟೋರೆಂಟ್, ರೆಸಾರ್ಟ್‌ಗಳ ಸಿಸಿ ಟಿವಿ ಆನ್ಲೈನ್ ಸಂಪರ್ಕ ಪೊಲೀಸ್ ಠಾಣೆಗೆ ಕಲ್ಪಿಸಿಕೊಂಡು‌ ನಿಗಾವಹಿಸಲಾಗುವುದೆಂದರು.

ಸಭೆಯಲ್ಲಿ ಸಬ್ಇನ್ಸ್ಪೆಕ್ಟರ್ ಗಳಾದ ಸೋಮಶೇಖರ್, ಗಜೇಂದ್ರ, ಮಂಜುನಾಥ್ ಮತ್ತಿತರಿದ್ದರು.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!