ಹೆಲ್ತ್ ಬುಲೆಟಿನ್ ಬಿಡುಗಡೆ: ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಮತ್ತಿಬ್ಬರ ಸಾವು / 42 ಮಂದಿಗೆ ಸೋಂಕು ದೃಢ

ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ  ಭಾನುವಾರದ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 42 ಜನರಿಗೆ ಕರೊನಾ ಸೋಂಕು ದೃಢಪಟ್ಟಿದ್ದು,ಸೋಂಕಿತರಿಬ್ಬರು  ತೀವ್ರ ಉಸಿರಾಟದ ತೊಂದರೆ ಹಾಗೂ ಸಕ್ಕರೆಕಾಯಿಲೆಯಿಂದಾಗಿ ಸಾವನಪ್ಪಿದ್ದಾರೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ,ಭಾನುವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 34 ಪುರುಷರು ಹಾಗೂ 8 ಮಹಿಳೆಯರು ಸೇರಿ 42 ಜನರಿಗೆ ಸೋಂಕು ದೃಡಪಟ್ಟಿದ್ದು,14 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಹರಿತಲೇಖನಿಗೆ ದೊರೆತಿರುವ ಮಾಹಿತಿಯಂತೆ.  ಸೋಂಕಿಗೆ ಒಳಗಾಗಿ ಆಕಾಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತೂಬಗೆರೆಯ 56 ವರ್ಷದ ಪುರುಷ ಹಾಗೂ ದೊಡ್ಡಬಳ್ಳಾಪುರ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಚ್ಚಪ್ಪನ ಪೇಟೆಯ 60ವರ್ಷದ ಮಹಿಳೆ ಸಾವನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ‌.

ಉಳಿದಂತೆ ಕುಚ್ಚಪ್ಪನಪೇಟೆ, ಕೋರ್ಟ್ ರಸ್ತೆ 3, ವಡ್ಡರಪೇಟೆ,ವಿದ್ಯಾ ನಗರ, ಖಾಸ್ ಭಾಗ್, ಬಾಶೆಟ್ಟಿಹಳ್ಳಿ, ಶ್ರೀನಗರ, ಶಾಂತಿನಗರ, ಮಲ್ಲತ್ ಹಳ್ಳಿಯಲ್ಲಿ ತಲಾ 2, ಮುತ್ಯಾಲಮ್ಮ ದೇವಸ್ಥಾನದ ರಸ್ತೆ, ಗಂಗಾಧರಪುರ ಲೇಔಟ್, ಸರ್ಕಾರಿ ಆಸ್ಪತ್ರೆ ಕ್ವಾಟ್ರಸ್, ಕಚೇರಿ ಪಾಳ್ಯ, ಸುಭಾಷ್ ನಗರ, ಮುತ್ತೂರು, ಮೆಳೇಕೋಟೆ, ಗುಂಡಮಗೆರೆ, ಚೈತನ್ಯನಗರ, ಡಿಕ್ರಾಸ್, ಪೊಲೀಸ್ ಕ್ವಾಟ್ರಸ್, ತಿಪ್ಪೂರು, ರೋಜಿಪುರ, ಬ್ಯಾಂಕ್ ಸರ್ಕಲ್, ಮಾರುತಿ ನಗರ, ಸೋತೇನಹಳ್ಳಿ, ದೇವರಾಜನಗರ, ದರ್ಗಾಜೋಗಹಳ್ಳಿ, ವಿನಾಯಕನಗರ, ತೂಬಗೆರೆ ಹಾಗೂ ಜಿಂಕೆಬಿದರಹಳ್ಳಿಯಲ್ಲಿ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 1379 ಮಂದಿಗೆ ಸೋಂಕು ತಗುಲಿದ್ದು, 894 ಮಂದಿ ಗುಣಮುಖರಾಗಿದ್ದರೆ 43 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 56 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 386 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ (Internal reservation) ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ

[ccc_my_favorite_select_button post_id="121345"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]