ದೊಡ್ಡಬಳ್ಳಾಪುರ: ಬಿಜೆಪಿ ಪಕ್ಷದ ಹಿರಿಯ ಮುಖಂಡ ಮಹದೇವ್ (53) ತೀವ್ರ ಹೃದಯಾಘಾತದಿಂದ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ದೊಡ್ಡಬಳ್ಳಾಪುರ ಪುರಸಭೆಯಾಗಿದ್ದ ವೇಳೆ ಕಚೇರಿ ಪಾಳ್ಯದ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದ ಮಹದೇವ್ ಅವರು, ಸುಮಾರು ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಶ್ರಮಿಸಿದ್ದಾರೆ.
ಮಡದಿ,ಮಗ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.