ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಲ್ಲಿ ತೆರವಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಪಿಎಂಸಿ ಅಧ್ಯಕ್ಷ ಎನ್.ವಿಶ್ವನಾಥ್ ರೆಡ್ಡಿ ಆಯ್ಕೆಯಾಗಿದ್ದಾರೆಂದು ಕೃಷಿ ಮಾರಾಟ ಮಂಡಳಿ ಉಪನಿರ್ದೇಶಕಿ ಕೆ.ಎಂ.ವಸುಂಧರಾ ಘೋಷಿಸಿದ್ದಾರೆ.
ಈ ಕುರಿತು ಎಪಿಎಂಸಿಗೆ ಬರೆದಿರುವ ಪತ್ರದಲ್ಲಿ ಈ ಕುರಿತು ತಿಳಿಸಿರುವ ಅವರು,ಸೋಮವಾರ ಬೆಳಗ್ಗೆ ಗ್ರಾಮಾಂತರ ಜಿಲ್ಲೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚೀಟಿ ಎತ್ತುವ ಮೂಲಕ ಮತದಾನ ಪ್ರಕ್ರಿಯೆ ನಡೆದಿದ್ದು,ದೊಡ್ಡಬಳ್ಳಾಪುರ ಎಪಿಎಂಸಿ ಅಧ್ಯಕ್ಷ ಎನ್.ವಿಶ್ವನಾಥ್ ಆಯ್ಕೆಯಾಗಿದ್ದಾರೆ ಎಂದಿದ್ದಾರೆ.
ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಸದಸ್ಯರಾಗಿ ಆಯ್ಕೆಯಾದ ವಿಶ್ವನಾಥ್ ರೆಡ್ಡಿ ಅವರನ್ನು ಶಾಸಕ ಟಿ.ವೆಂಕಟರಮಣಯ್ಯ, ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಾಪಂ ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್ ಅಭಿನಂದನೆ ಸಲ್ಲಿಸಿದ್ದಾರೆ.