ಯಲಹಂಕ: ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಯಲಹಂಕ ಮೇಲ್ಸೇತುವೆಗೆ ರಾಜ್ಯ ಸರ್ಕಾರ ವೀರ ಸಾವರ್ಕರ್ ಹೆಸರನ್ನು ನಾಮಕರಣ ಮಾಡಿದೆ.
ಬಿಬಿಎಂಪಿಯಿಂದ 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೇತುವೆಯ ನಾಮಕರಣದ ಕಾರ್ಯಕ್ರಮವನ್ನು ಸಿಎಂ ಯಡಿಯೂರಪ್ಪನವರು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಶ್ವತನಾರಾಯಣ,ಸಚಿವರಾದ ಸಿ.ಟಿ.ರವಿ, ಶಾಸಕರಾದ ಎಸ್.ಆರ್.ವಿಶ್ವನಾಥ ಹಾಗೂ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಬಿಗಿ ಭದ್ರತೆಯಲ್ಲಿ ನಡೆಸಲಾಗಿದ್ದು,ಹಿಂದು ಪರ ಸಂಘಟನೆಗಳ ಸಾವರ್ಕರ್ ಪರ ಜಯಘೋಷ ಮುಗಿಲು ಮುಟ್ಟಿತ್ತು.