ಕೃತಕ ರಸಗೊಬ್ಬರ,ಯೂರಿಯಾ ಅಭಾವ ಸೃಷ್ಟಿ: 117 ಅಂಗಡಿಗಳ ಪರವಾನಿಗೆ ರದ್ದು

ಮೈಸೂರು: ರಸಗೊಬ್ಬರ, ಯೂರಿಯಾ ಗೊಬ್ಬರದ ಕೃತಕ ರಸಗೊಬ್ಬರ ಅಭಾವ ಸೃಷ್ಟಿಸಿ ಸಮಸ್ಯೆ ಹುಟ್ಟಿಹಾಕಿದ್ದ ರಾಜ್ಯಗಳ 117 ಅಂಗಡಿಗಳ ಪರವಾನಿಗೆಯನ್ನು ರದ್ದುಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಮೈಸೂರಿನಲ್ಲಿಂದು ಕೃಷಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇದೇ ಮೊದಲ ಬಾರಿಗೆ ತಮ್ಮ ಅವಧಿಯಲ್ಲಿ ಕಳಪೆ ಬಿತ್ತನೆ ಬೀಜ ಮಾರಾಟ ಜಾಲವನ್ನು ಬೇಧಿಸಲಾಗಿದ್ದು, ಹಾವೇರಿ ಜಿಲ್ಲೆ ಮೊದಲ ಬಾರಿಗೆ 12 ಕೋಟಿ ರೂ.ಮೊತ್ತದ ಕಳಪೆ ಬೀಜ ಪತ್ತೆ ಮಾಡಿ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಕೃತಕ ಗೊಬ್ಬರ ಅಭಾವ ಸೃಷ್ಟಿಸುವವರ ವಿರುದ್ಧ ಜಾಗೃತ ದಳ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ರಸಗೊಬ್ಬರ ಅಂಗಡಿ ಮಾರಾಟಗಾರರ ವಿರುದ್ಧ ದಾಳಿ ನಡೆಸಿದ್ದಾರೆ. ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರು ಎಷ್ಟೇ ದೊಡ್ಡ ವ್ಯಕ್ತಿಯಾದರೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸದೇ ಬಿಡುವುದಿಲ್ಲ. ಸೂಕ್ತ ಬಿತ್ತನೆ ಮಾಡಿದ ಕಳಪೆಯಾಗಿರುವುದು ಸಾಬೀತಾದಲ್ಲಿ ಬೀಜ ವಿತರಿಸಿದ ಕಂಪೆನಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಅಲ್ಲದೇ ಆ ಕಂಪೆನಿ ಬಿತ್ತನೆ ನಷ್ಟ ಭರಿಸಿಕೊಡಬೇಕಾಗುತ್ತದೆ ಎಂದು ಸಚಿವರು ಎಚ್ಚರಿಸಿದರು.

23 ದಿನಗಳಲ್ಲಿ 74 ಲಕ್ಷ ರೈತರು ರಾಜ್ಯದ್ಯಾಂತ ಬೆಳೆ ಸಮೀಕ್ಷೆಗೆ ತಮ್ಮ ಫೋಟೋ ಅಪ್ಲೋಡ್ ಮಾಡಿದ್ದಾರೆ. ರೈತರು ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ಹೆಚ್ಚು ಆಸಕ್ತರಾಗಿದ್ದಾರೆ. ಬೆಳೆ ಸಮೀಕ್ಷೆ ಆ್ಯಪ್ ಜನಾಂದೋಲನವಾಗಿದೆ. ಹೊಲಕ್ಕೆ ಹೋಗಿ ಬೆಳೆ ಸಮೀಕ್ಷೆ ಮಾಡಲಾಗದ ರೈತರು ತಮಗೆ ಹೊಲಕ್ಕೆ ಹೋಗಲಾಗುತ್ತಿಲ್ಲ. ತಮ್ಮ ಬದಲಿಗೆ ಬೇರೆಯವರನ್ನು ಸಮೀಕ್ಷೆಗೆ ಅಧಿಕಾರ ಕೊಡುತ್ತಿರುವುದಾಗಿ ಪತ್ರ ಕೊಟ್ಟರೂ ಸ್ವೀಕರಿಸಲಾಗುತ್ತದೆ. ಸೆಪ್ಟೆಂಬರ್ 10 ರಿಂದ ಪಬ್ಲಿಕ್ ರೆಸಿಡಿನ್ಸ್ ಗೂ ಅವಕಾಶ ಮಾಡಿಕೊಡಲಾಗುತ್ತಿದೆ.ಈ ಪಬ್ಲಿಕ್ ರೆಸಿಡಿನ್ಸ್ ಅಂದರೆ ನೆಟ್ವರ್ಕ್ ಇಲ್ಲದ ಜಾಗದಲ್ಲಿ ಗ್ರಾಮದ ನಕ್ಷೆಯನ್ನು ಮೊಬೈಲ್ನಲ್ಲಿ ಡೌನ್ಲೋಡ್ ಮಾಡಿಕೊಂಡು ಫೋಟೋ ತೆಗೆದುಕೊಂಡು ಬಳಿಕ ನೆಟ್ವರ್ಕ್ ಇರುವ ಜಾಗಕ್ಕೆ ಹೋಗಿ ಅಪ್ಲೋಡ್ ಮಾಡಬಹುದಾಗಿದೆ ಎಂದರು.

ಬೆಳೆ ಸಮೀಕ್ಷೆಗೆ ರೈತರು ಹೆಚ್ಚು ಒತ್ತು ನೀಡಬೇಕು. ಬೆಳೆ ಸಮೀಕ್ಷೆ ನಿರೀಕ್ಷೆ ಮಟ್ಟದಲ್ಲಿ  ಾಘದ ಕಾರಣ ಮತ್ತು ಕರ್ತವ್ಯ ನಿರ್ಲಕ್ಷ್ಯವಹಿಸಿದ ಮೇರೆಗೆ ಚಾಮರಾಜನಗರ, ಮಂಡ್ಯ, ಅರಸಿಕೆರೆ, ಕಡೂರು ಜಿಲ್ಲೆಗಳ ಕೃಷಿ ಅಧಿಕಾರಿಗಳ ವಿರುದ್ಧ ಕ್ರಮಜರುಗಿಸಲಾಗುತ್ತಿದೆ. ಕೃಷಿ ಅದಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಒಂದು ವಾರದಲ್ಲಿ ಸಂಪೂರ್ಣ ಬೆಳೆ ಸಮೀಕ್ಷೆಯಾಗಬೇಕು. ಸೆಪ್ಟೆಂಬರ್ 23 ರ ಬಳಿಕ ಪರಿಶೀಲನೆ ಕಾರ್ಯ ಆರಂಭವಾಗಲಿದೆ. ಬೆಳೆ ಸಮೀಕ್ಷೆ ಸೌಲಭ್ಯದಿಂದ ಯಾರೂ ವಂಚಿತರಾಗಬಾರದು.ಖಾಸಗಿ ನಿವಾಸಿಗಳ ಸಹಾಯಪಡೆದು ರೈತರು ತಮ್ಮ ಜಮೀನಿನ ಬೆಳೆಸಮೀಕ್ಷೆಯನ್ನು ತಾವೇ ಮಾಡಿ ವಿವರ ದಾಖಲಿಸಿ ಫೋಟೋ ಅಪ್ಲೋಡ್ ಮಾಡಬೇಕು.ಹೆಚ್ಚೆಚ್ಚು ಸಂಖ್ಯೆಯಲ್ಲಿ ಮತ್ತು ಆದಷ್ಟುಬೇಗ ಎಲ್ಲಾ ರೈತರು ಬೆಳೆ ಸಮೀಕ್ಷೆ ಆ್ಯಪ್ನಲ್ಲಿ ವಿವರ ದಾಖಲಿಸಲೇಬೇಕು ಎಂದು ಸಚಿವರು ಒತ್ತಿ ಹೇಳಿದರು.

10 ಲಕ್ಷ ಮೆಕ್ಕೆಜೋಳ ರೈತರಿಗೆ 5 ಸಾವಿರ ರೂ.ನಂತೆ 500 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿದಂತೆ 7 ಲಕ್ಷದ 6 ಸಾವಿರ ರೈತರ ಅಕೌಂಟ್ ಗೆ ಬಿಡುಗಡೆ ಮಾಡಲಾಗಿದೆ. ಜಂಟಿ ಖಾತೆ ಇರುವ ರೈತರು ತಮ್ಮ ಒಪ್ಪಿಗೆ ಪತ್ರದ ಪ್ರಮಾಣ ಪತ್ರವನ್ನು ಇಲಾಖೆಗೆ ನೀಡಬಹುದಾಗಿದೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಯೂರಿಯಾ ಗೊಬ್ಬರದ ಬೇಡಿಕೆ ಬಗ್ಗೆ ಪ್ರಸ್ತಾಪಿಸಲಾಗಿದ್ದು, ಮೈಸೂರು ವಿಭಾಗದ 8 ಜಿಲ್ಲೆಗಳಲ್ಲಿ 43,230 ಟನ್ ಹೆಚ್ಚುವರಿ  ಯೂರಿಯಾ ಸಂಗ್ರಹವಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಒಟ್ಟು 52,49,236 ರೈತರಿಗೆ 4,845.15 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿಗಳ ಕಿಸಾನ್ ಸಮ್ಮಾನ್ ಯೋಜನೆಯಡಿ 1,010 ಕೋಟಿ  ಇಲ್ಲಿಯವರೆಗೂ ಹೋಗಿದೆ  ಎಂದು ಕೃಷಿ ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಚಿಕ್ಕಮಗಳೂರು, ಮಂಡ್ಯ, ಕೊಡಗು, ಮೈಸೂರು, ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಾಮರಾಜನಗರ ಜಿಲ್ಲೆಯ ಜಂಟಿ ನಿರ್ದೇಶಕರು ಹಾಗೂ ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು

ರಾಜಕೀಯ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ (Internal reservation) ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ

[ccc_my_favorite_select_button post_id="121345"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]