ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 8 ರಂದು) 86 ಪುರುಷರು ಹಾಗೂ 18 ಮಹಿಳೆಯರು ಸೇರಿದಂತೆ 104 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.

ವರದಿ ಅನ್ವಯ ನೆಲಮಂಗಲ ತಾಲ್ಲೂಕಿನಲ್ಲಿ 3 ಪುರುಷರು ಮತ್ತು 1 ಮಹಿಳೆಗೆ, ಹೊಸಕೋಟೆ ತಾಲ್ಲೂಕಿನಲ್ಲಿ 10 ಪುರುಷರು ಮತ್ತು 1 ಮಹಿಳೆಗೆ, ದೇವನಹಳ್ಳಿ ತಾಲ್ಲೂಕಿನಲ್ಲಿ 67 ಪುರುಷರು ಮತ್ತು 14 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 1 ಪುರುಷನಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸೋಂಕಿತರ ಮಾಹಿತಿ ಕುರಿತು ಜಿಲ್ಲಾ ಆರೋಗ್ಯ ಇಲಾಖೆ ವರದಿ ಗೊಂದಲ ಓದುಗರಿಗೂ ತಿಳಿದರಿರುವ ಕಾರಣ ಹರಿತಲೇಖನಿ ಪ್ರಕಟಿಸುತ್ತಿಲ್ಲ.
