ದೊಡ್ಡಬಳ್ಳಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಅಡಿಯಲ್ಲಿ ಯುವಜನರಿಗೆ ತರಬೇತಿ/ ಕಲಾವಿದರಿಗೆ ಪ್ರೋತ್ಸಾಹಧನಗಳನ್ನು ರಾಜ್ಯ ವಲಯದಿಂದ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜೀವರಕ್ಷಕ(ಲೈಫ್ ಗಾರ್ಡ್), ಜಿಮ್/ಫಿಟ್ನೆಸ್ ತರಬೇತುದಾರರು, ಕ್ರೀಡಾ ಅಂಕಣ ಗುರುತುಗಾರ(ಮಾರ್ಕರ್)ರಿಗೆ ತರಬೇತಿ ಹಾಗೂ ಯುವಜನ ಮೇಳ/ಯುವಜನೋತ್ಸವ ಕಾರ್ಯಕ್ರಮಗಳಲ್ಲಿ ವೈಯಕ್ತಿಕ/ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ವಿಜೇತ ಎಸ್‍ಸಿ/ಎಸ್‍ಟಿ ಸಂಘ ಸಂಸ್ಥೆಗಳಿಗೆ ಹಾಗೂ ಕಲಾವಿದರುಗಳಿಗೆ

ಪ್ರೋತ್ಸಾಹಧನವನ್ನು ನೀಡಲಾಗುವುದು. ತರಬೇತಿ/ ಪ್ರೋತ್ಸಾಹಧನವನ್ನು ಆಸಕ್ತ ಯುವಜನರಿಗೆ(ಯುವಕ:ಯುವತಿಯರಿಗೆ) / ಕಲಾವಿದರುಗಳಿಗೆ ಆಯೋಜಿಸಲಾಗುವುದು. ಆಸಕ್ತರು, 2020ರ ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ, ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೂ.ಸಂ.:9845608598/ 08029787443 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
