ಕಂದಾಯ ಸಚಿವ ಆರ್.ಅಶೋಕ್ ವಿರುದ್ದ ಭೂಕಳ್ಳರ ರಕ್ಷಣೆಗೆ ನಿಂತ ಆರೋಪ..!

ದೊಡ್ಡಬಳ್ಳಾಪುರ: ಅಪಹರಣ ಮಾಡಿ ಭೂಮಿ ನೊಂದಾವಣೆ ಮಾಡಿಸಿಕೊಂಡವರಿಗೆ ರಕ್ಷಣೆ ನೀಡುತ್ತಿರುವ ಸಚಿವ ಆರ್.ಅಶೋಕ್ ಅವರನ್ನು ಈ ಕೂಡಲೇ ಮುಖ್ಯಮಂತ್ರಿಗಳು ಸಂಪುಟದಿಂದ ಕೈ ಬಿಡಬೇಕೆಂದು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಒತ್ತಾಯಿಸಿದರು.

Guarantee scheme
ಎನ್ ವಿಶ್ವನಾಥ್

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು.

ಬಿಬಿಎಂಪಿ ವ್ಯಾಪ್ತಿಯ ಸಿಂಗಾಪುರದಲ್ಲಿ ಸುಮಾರು 10 ಕೋಟಿ ಬೆಲೆಯ 1.20  ಎಕರೆ ಭೂಮಿ ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿಯ ಮುನಿಯಪ್ಪ ಮತ್ತವರ ಸಹೋದರರಿಗೆ ಸೇರಿದ್ದಾಗಿದ್ದು, ಕಂದಾಯ ಸಚಿವ ಆರ್.ಅಶೋಕ್ ಅವರ ಆಪ್ತ  ಮುನಿಯಪ್ಪ ಅವರ ಸಹೋದರರನ್ನು 2013 ರಲ್ಲಿ ಅಪಹರಣ ಮಾಡಿ ಈ ಭೂಮಿಯನ್ನು ಬಲವಂತವಾಗಿ ಖರೀದಿ ಮಾಡಿದ್ದು ಈ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ದಾವೆ ನಡೆಯುತ್ತಿದೆ ಎಂದ ಅವರು  ಕಂದಾಯ ಸಚಿವ ಆರ್.ಅಶೋಕ್ ಅವರ ಆಪ್ತ  ಬಿ.ಎಂ.ರಂಗಸ್ವಾಮಿ ಅವರು ಈ ಭೂಮಿಯನ್ನು ಕಬಳಿಸಲು ಸಂಚು ಮಾಡಿ ದಿನಾಂಕ ಆ.17 ರಂದು ಭೂಮಿಯ ಮಾಲಿಕರಾದ ಮುನಿಯಪ್ಪ ಅವರನ್ನು ತಮ್ಮ ಹಿಂಬಾಲಕರ ಮೂಲಕ ಅಪಹರಣ ಮಾಡಿಸಿ ಬೆದರಿಕೆ ಹಾಕಿ ಒಪ್ಪಿಗೆ ಪತ್ರ ಮಾಡಿಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ ಅವರು ಸಂಬಂಧಿಪಟ್ಟಂತೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿಗಳನ್ನು ಈ ವರೆಗೆ ಪೊಲೀಸರು ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಆರ್.ಅಶೋಕ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದು ಪೊಲೀಸರು ಸಹ ಸಚಿವರ ಆಪ್ತ ಬಿ.ಎಂ.ರಂಗಸ್ವಾಮಿ ಅವರಿಗೆ ಬೆಂಬಲ ನೀಡುತ್ತಿದ್ದು ಆರೋಪಿಗಳ ಬಂಧನಕ್ಕೆ ಒಂದು ವಾರದ ಗಡುವು ನೀಡುತ್ತಿದ್ದೇವೆ ಹಾಗೆಯೇ ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಿ ಘಟನೆಯ ಪಾರದರ್ಶಕ ತನಿಖೆಗೆ ಸಹಕಾರ ನೀಡಬೇಕು ತಪ್ಪಿದರೆ ನಮ್ಮ ಪಕ್ಷದ ವತಿಯಿಂದ ಮುಖ್ಯಮಂತ್ರಿಗಳ ಮನೆಯ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಭೂಮಿಯ ಮಾಲಿಕರಾದ ಬಿ.ಮುನಿಯಪ್ಪ ರಾಜಣ್ಣ ಮತ್ತು ಮುನೇಗೌಡ ಅವರುಗಳು ಮಾತನಾಡಿ, ನಮ್ಮ ತಾಯಿಯ ತವರು ಮನೆಯ 3 ಎಕರೆ ಭೂಮಿಯಲ್ಲಿ ಹೆಣ್ಣು ಮಕ್ಕಳಿಗೆ 1-20 ಎಕರೆ ಪಾಲು ಬಂದಿದ್ದು, ನಮ್ಮ ಮಾವನವರ 1-20 ಎಕರೆ ಭೂಮಿಯನ್ನು ಇದೇ ರಂಗಸ್ವಾಮಿ ಅವರು ಖರೀದಿ ಮಾಡಿದ್ದು ಹೆಣ್ಣು ಮಕ್ಕಳಿಗೆ ಬಂದಿರುವ ಭೂಮಿಯನ್ನು ರಂಗಸ್ವಾಮಿ ಅವರು ಕಬಳಿಸಲು ಸಂಚು ಮಾಡಿದ್ದು ನಮಗೆ ಪೊಲೀಸರ ಮೂಲಕ ಬೆದರಿಕೆ ಹಾಕಿ, ಮಾನಸಿಕವಾಗಿ ಮತ್ತು ದೈಹಿಕವಾಗಿ ನಮಗೆ ಹಿಂಸೆ ಮಾಡುತ್ತಿದ್ದು ಈ ಹಿಂಸೆಯಿಂದ ಮನನೊಂದು ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ನೋವಿನಲ್ಲಿರುವ ನಮ್ಮನ್ನು ಅಪಹರಿಸಿ ನೊಂದಾವಣಿ ಮಾಡಿಕೊಂಡಿದ್ದಾರೆ ಆದರೂ ಪೊಲೀಸರು ಆರೋಪಿಗಳನ್ನು ಬಂದಿಸಿಲ್ಲ ಎಂದು ತಮ್ಮ ನೋವು ತೋಡಿಕೊಂಡರು.

ಪತ್ರಿಕಾಗೋಷ್ಠಿಯಲ್ಲಿ BSP ಯ ರಾಜ್ಯ ಕಾರ್ಯದರ್ಶಿಗಳಾದ ಬಸವರಾಜು, ನಂದಿಗುಂದ ಪಿ.ವೆಂಕಟೇಶ್, ನ್ಯಾಯವಾದಿ ಮುನಿಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!